ಕನ್ನಡ ನಾಡು | Kannada Naadu

ಕರಾವಳಿ ತೀರದಲ್ಲಿ ಮೀನುಗಾರಿಕಾ ಚಟುವಟಿಕೆ ನಿಷೇಧ

21 May, 2025

ದಕ್ಷಿಣ ಜಿಲ್ಲೆಯ ಜಿಲ್ಲೆಯ ಕರಾವಳಿ ತೀರದಲ್ಲಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ರೀತಿಯ ಯಾಂತ್ರೀಕೃತ ದೋಣಿಗಳ ಮೂಲಕ ಹಾಗೂ 10 ಹಾರ್ಸ್ ಪವರ್ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ನಡೆಸುವ ಮೀನುಗಾರಿಕಾ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ನಿಷೇಧಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾ‌ರ್ ಇಂಜಿನ್ ಹಾಗೂ ನಾಡದೋಣಿಗಳ ಮೂಲಕ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧಿಸಿರುವ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರ ಅಡಿಯಲ್ಲಿ ಒಂದು ವರ್ಷ ಅವಧಿಗೆ ರಾಜ್ಯ ಸರ್ಕಾರ ನೀಡುವ ತೆರಿಗೆ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಮೀನುಗಾರರು ಈ ಆದೇಶವನ್ನು ಪಾಲಿಸಿ ಸಹಕರಿಸಬೇಕು ಎಂದು ದಕ್ಷಿಣ ಕನ್ನಡ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Publisher: ಕನ್ನಡ ನಾಡು | Kannada Naadu

Login to Give your comment
Powered by