ಕನ್ನಡ ನಾಡು | Kannada Naadu

ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರಿನಲ್ಲಿ ಮತ್ತಿಬ್ಬರಲ್ಲಿ ಸೋಂಕು ಪತ್ತೆ

25 May, 2025

 ಬೆಂಗಳೂರ: ಮಹಾಮಾರಿ ಕೊರೊನಾ ಸೋಂಕು ರಾಜ್ಯದಲ್ಲಿ ಮತ್ತೆ ಹೆಚ್ಚುತ್ತಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಮತ್ತಿಬ್ಬರಲ್ಲಿ ಸೋಂಕು ದೃಢಪಟ್ಟಿದೆ.

ಈ ಮೂಲಕ ಬೆಂಗಳೂರಿನಲ್ಲಿಯೇ 34 ಕೋವಿಡ್ ಕೇಸ್ ಗಳು ಪತ್ತೆಯಾದಂತಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಹಾಗೂ ರಾಜಾಜಿನಗರದ ಇಬ್ಬರಲ್ಲಿ ಕೊರೊನಾ ಸೋಂಕು ದೃಢ ಪಟ್ಟಿದೆ.

ಮಲ್ಲೇಶ್ವರಂನ 45 ವರ್ಷದ ವ್ಯಕ್ತಿ ಹಾಗೂ ರಾಜಾಜಿನಗರದ 38 ವರ್ಷದ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರಿಗೂ ಯಾವುದೇ ಟ್ರಾವೆಲ್ ಹಿಸ್ಟ್ರಿ ಇಲ್ಲ ಆದಾಗ್ಯೂ ಸೋಂಕು ಪತ್ತೆಯಾಗಿದೆ.

ಇಬ್ಬರನ್ನೂ ಹೋಂ ಐಸೊಲೇಶನ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಮಾಸ್ಕ್ ಧರಿಸಿ, ಕೈಗಳನ್ನು ಸ್ವಚ್ಛವಾಗಿಟ್ಟುಕೊಂಡಿರಬೇಕು. ಕೆಮ್ಮು, ನೆಗಡಿ, ಜ್ವರದಂತಹ ಲಕ್ಷಣ ಕಂಡುಬಂದರೆ ನಿರ್ಲಕ್ಷ ಮಾಡದೇ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.

Publisher: ಕನ್ನಡ ನಾಡು | Kannada Naadu

Login to Give your comment
Powered by