ಕನ್ನಡ ನಾಡು | Kannada Naadu

ರಾಜ್ಯ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

29 May, 2025

ಬೆಂಗಳೂರು : 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ಆದೇಶ ನೀಡಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.

ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ಆದೇಶಿಸಿದ್ದ ರಾಜ್ಯ ಸರ್ಕಾರದ 2024ರ ಅ.15ರ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬುವವರು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಇದೀಗ ಸರ್ಕಾರದ ಆದೇಶ ರದ್ದು ಮಾಡಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by