ಕನ್ನಡ ನಾಡು | Kannada Naadu

ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ: 7 ಅಭಿಮಾನಿಗಳು ಸಾವು

04 Jun, 2025

ಬೆಂಗಳೂರು :  18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದಿರುವ ಆರ್ ಸಿಬಿ ವಿಜಯೋತ್ಸವ ನೋಡಲೆಂದು ಆಗಮಿಸಿದ್ದ 7 ಅಭಿಮಾನಿಗಳು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿಬಿ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಜನಸಾಗರವೇ ಸ್ಟೆಡಿಯಂನತ್ತ ಹರಿದುಬಂದಿದೆ. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ನೆರೆದಿದ್ದ ಜನರು ಸ್ಟೇಡಿಯಂ ಗೇಟ್ ಗಳನ್ನು ಮುರಿದು ಪ್ರವಾಹದಂತೆ ಒಳನುಗ್ಗಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರು ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. 15 ಜನರು ಅಸ್ವಸ್ಥರಾಗಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by