ಬೆಂಗಳೂರು: ಬೆಂಗಳೂರು ಕಾಲ್ತುಳಿತ ದುರಂತ ಸದ್ಯ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.ಜೊತೆಗೆ ಸರಕಾರ ಮ್ಯಾಜಿಸ್ಟ್ರೇಟ್ ತನಿಖೆಗೂ ಸರ್ಕಾರ ಆದೇಶಿಸಿದೆ.
ಈ ಮಧ್ಯೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೂಡ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಎಸ್ಸಿಎ ವಿರುದ್ಧ ದೂರು ದಾಖಲಿಸಿದ್ದಾರೆ. ಇದೀಗ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್ಸಿಬಿ (RCB) ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಸಂಭವಿಸಿದ ಕಾಲ್ತುಳಿತ ಹಾಗೂ 11 ಜನರ ಸಾವಿಗೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದು, ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಿಗದಿಪಡಿಸಿದೆ.
Publisher: ಕನ್ನಡ ನಾಡು | Kannada Naadu