ಕನ್ನಡ ನಾಡು | Kannada Naadu

ಸಚಿವ ಸತೀಶ್‌ ಜಾರಕಿಹೊಳಿ ಭೇಟಿಯಾದ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌

05 Jun, 2025

ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕವಾದ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರು ಬೆಂಗಳೂರಿನ ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಇದೇ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಲೋಕೋಪಯೋಗಿ ಇಲಾಖೆಗೆ ನೂತನ ಕಾರ್ಯದರ್ಶಿಯಾಗಿ ನೇಮಕವಾದ ಹಿರಿಯ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರೊಂದಿಗೆ ಇಲಾಖೆಯ ಕೆಲ ಪ್ರಮುಖ ಯೋಜನೆಗಳ ವೇಗ ಹೆಚ್ಚಿಸುವ ಕುರಿತು ಚರ್ಚೆ ನಡೆಸಿದರು. 

ಅಮ್ಲಾನ್ ಆದಿತ್ಯ ಬಿಸ್ವಾಸ್- 1997ನೇ ಬ್ಯಾಚಿನ ಐಎಎಸ್ ಅಧಿಕಾರಿ. ಮೂಲತಃ ಪಶ್ಚಿಮ ಬಂಗಾಳದವರು. ಇತಿಹಾಸದಲ್ಲಿ ಸ್ನಾತಕೋತ್ತರ ಪದವೀಧರ ಪಡೆದಿದ್ದಾರೆ. 2011ರ ಫೆಬ್ರವರಿ 21ರಿಂದ ಬಳ್ಳಾರಿ ಜಿಲ್ಲಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅದಕ್ಕೂ ಮುನ್ನ ಚಿತ್ರದುರ್ಗ ಜಿಲ್ಲಾಧಿಕಾರಿ ಸೇವೆ ಸಲ್ಲಿಸಿದ್ದಾರೆ.

ಬೆಂಗಳೂರು, ಕಲಬುರಗಿ, ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿಯೂ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರು ಸೇವೆ ಸಲ್ಲಿಸಿದಾರೆ. 

Publisher: ಕನ್ನಡ ನಾಡು | Kannada Naadu

Login to Give your comment
Powered by