ಕನ್ನಡ ನಾಡು | Kannada Naadu

ಸಂಭ್ರಮಾಚರಣೆ ವೇಳೆ ಮೃತಪಟ್ಟವರಿಗೆ ಆರ್ಸಿಬಿ, ಕೆಎಸ್ಸಿಎ ಒಂದು ಕೋಟಿ ಪರಿಹಾರ ನೀಡಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ 

06 Jun, 2025

 

 ಬೆಳಗಾವಿ: 18 ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿದ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಮೃತಪಟ್ಟ ಕುಟುಂಬದವರಿಗೆ ಕೆಎಸ್ಸಿಎ ಹಾಗೂ ಆರ್ ಸಿಬಿ ಮ್ಯಾನೇಜ್ಮೆಂಟ್ ವತಿಯಿಂದ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ದಾರೆ. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಅಭಿಮಾನಿಗಳ ಸಾವು ನೋವು ತಂದಿದೆ. ಆರ್ ಸಿಬಿ ಹಾಗೂ ಕೆ ಎಸ್ಸಿಎ‌ ಹೆಚ್ಚಿನ ಪರಿಹಾರ ಕೊಡಬೇಕು ಎಂದರು. 

ಈ ಪ್ರಕರಣದಲ್ಲಿ ವಿರೋಧ ಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ. ನಮ್ಮ ಹಿರಿಯರು ಇದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ. ರಾಜಕಾರಣಕ್ಕಿಂತ ಘಟನೆ ಯಾಕೆ ಆಯಿತು ಎಂಬುದು ಗೊತ್ತಾಗಬೇಕು. ಇಂಥ ದುರ್ಘಟನೆ ನಡೆದಿದ್ದು ನಿಜಕ್ಕೂ ದುರದೃಷ್ಟಕರ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Publisher: ಕನ್ನಡ ನಾಡು | Kannada Naadu

Login to Give your comment
Powered by