ಕನ್ನಡ ನಾಡು | Kannada Naadu

ಕಮಿಷನರ್ ದಯಾನಂದ್ ಅಮಾನತು ಖಂಡಿಸಿ ಹೆಡ್ ಕಾನ್ಸ್ ಟೇಬಲ್ ಪ್ರತಿಭಟನೆ

06 Jun, 2025

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನ ಆರ್ ಸಿಬಿ ಅಭಿಮಾನಿಗಳು ಬಲಿಯಾಗಿರುವ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಕಮಿಷನರ್ ಬಿ.ದಯಾನಂದ್ ಅವರನ್ನು ಅಮಾನತುಗೊಳಿಸಿರುವ ಸರ್ಕಾರದ ಆದೇಶದ ವಿರುದ್ಧ ಹೆಡ್ ಕಾನ್ಸ್ ಟೇಬಲ್ ಓರ್ವರು ಪ್ರತಿಭಟನೆ ನಡೆಸಿದ್ದಾರೆ. ಮಡಿವಾಳ ಠಾಣೆಯ ಹೆಡ್ ಕಾನ್ಸ್ ಟೇಭಲ್ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ.

ನರಸಿಂಹರಾಜು ಎಂಬ ಹೆಡ್ ಕಾನ್ಸ್ ಟೇಬಲ್, ಸರ್ಕಾರದ ಆದೇಶ ಖಂಡಿಸಿ ಕೈಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋ ಹಿಡಿದು, ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕಾಗಮಿಸಿದ ವಿಧಾನಸೌಧ ಪೊಲೀಸರು, ಹೆಡ್ ಕಾನ್ಸ್ ಟೇಬಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Publisher: ಕನ್ನಡ ನಾಡು | Kannada Naadu

Login to Give your comment
Powered by