ಚಿಕ್ಯಕೊಡಿ: ಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಕಾರಹುಣ್ಣಿಮೆ ನಿಮಿತ್ಯವಾಗಿ ರಾಜ್ಯ ಮಟ್ಟದ ಬ್ರಹತ್ ಎತ್ತುಗಳ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ನಿಪ್ಪಾಣಿ ಸಮಾಧಿ ಮಠದ ಶ್ರೀ ಪ್ರಾಣಲಿಂಗ ಸ್ವಾಮೀಜಿ, ಸದಲಗಾ ಗೀತಾಶ್ರಮದ ಡಾ.ಶೃದ್ದಾನಂದ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ, ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ್ ಅಧ್ಯಕ್ಷ್ಯರಾದ ಬಸವಪ್ರಸಾದ ಜೊಲ್ಲೆ ಉದ್ಘಾಟಿಸಿದರು.
ವಿಜೇತರಿಗೆ ಬಹುಮಾನ ವಿತರಣೆ
ಎತ್ತುಗಳ ಪ್ರದರ್ಶನವನ್ನು ವೀಕ್ಷಿಸಿದ ಬಳಿಕ ವಿಜೇತರಾದವರಿಗೆ. 75,000/- ಬಹುಮಾನ ವಿತರಿಸಿದರು.
ಗ್ರಾಮೀಣ ಕಲೆ, ಕ್ರೀಡೆಗಳನ್ನು ಆಯೋಜಿಸುವ ಮೂಲಕ ನಮ್ಮ ಗ್ರಾಮೀಣ ಸಂಸ್ಕೃತಿಯ ಸೊಗಡನ್ನು ಪೋಷಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಎತ್ತುಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಬಸವಪ್ರಸಾದ ತಿಳಿಸಿದರು.
ಈ ಸಂದರ್ಭದಲ್ಲಿ ಜೊಲ್ಲೆ ಗ್ರೂಪ್ ಅಂಗ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಸ್ಥಳೀಯ ಮುಖಂಡರು, ಗಣ್ಯರು, ಉಪಸ್ಥಿತರಿದ್ದರು.
Publisher: ಕನ್ನಡ ನಾಡು | Kannada Naadu