ಕನ್ನಡ ನಾಡು | Kannada Naadu

ದಿಢೀರ್ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ

09 Jun, 2025

 ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರ ನೀಡಲಿದ್ದಾರೆ. ಈ ವೇಳೆ ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತ, ಕೈಗೊಂಡಿರುವ ಕ್ರಮಗಳು ಮೊದಲಾದ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by