ಕನ್ನಡ ನಾಡು | Kannada Naadu

ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ: ಬೆಂಗಳೂರಿನಲ್ಲಿ ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ

09 Jun, 2025

ಬೆಂಗಳೂರು : ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ.

ಬೆಂಗಳೂರಿನ ಶಾಂತಿನಗರ, ಕಬ್ಬನ್ ಪಾರ್ಕ್, ಲಾಲ್ ಬಾಗ್, ರಿಚ್ಮಂಡ್ ವೃತ್ತ, ಎಂ.ಜಿ.ರಸ್ತೆ, ಟೌನ್ ಹಾಲ್, ಕೆ.ಆರ್. ಮಾರ್ಕೆಟ್, ಜಯನಗರ, ಜೆಪಿ ನಗರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಚುರುಕಾಗಲಿದೆ. ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯನಗರ, ದಾವಣಗೆರೆ ಜಿಲ್ಲೆಗಾಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by