ಕನ್ನಡ ನಾಡು | Kannada Naadu

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ

10 Jun, 2025

ದೆಹಲಿ:ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ದೆಹಲಿಯಲ್ಲಿ ಭೇಟಿ ಮಾಡಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿ ಕುರಿತು ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು.
ರಾಜ್ಯದ ವಿವಿಢೆದೆ ಒಟ್ಟು 42 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೊಳ್ಳಲಾಗಿದ್ದು, ಈ ಪೈಕಿ 27 ಕಾಮಗಾರಿ ಪೂರ್ಣಗೊಂಡಿವೆ. ಇನ್ನು 15 ರಾಷ್ಟ್ರೀಯ ಹೆದ್ದಾರಿಗಳು ಅಪ್​ಗ್ರೇಡ್ ಆಗಬೇಕಿದೆ. ಬೆಂಗಳೂರಿನಲ್ಲಿ ಸುರಂಗ ನಿರ್ಮಿಸುವ ಬಗ್ಗೆ ಆಸಕ್ತಿ ವಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದಾರೆ. ಅಂತಿಮವಾದ ಪ್ರಸ್ತಾವನೆ ಮುಂದಿನ ದಿನಗಳಲ್ಲಿ ಇಡಲಿದ್ದೇವೆ. ಯಾರು ಹಣ ಹೂಡಿಕೆ ಮಾಡಬೇಕೆಂದು ನಿರ್ಧಾರ ಮಾಡಬೇಕು ಎಂದರು.
ಗೊಂದಲ ಇರುವ ಬಗ್ಗೆ ನಾವು ಪರಿಹಾರ ಕಂಡುಕೊಂಡಿದ್ದೇವೆ. ಸ್ಪಷ್ಟವಾದ ಪ್ರಸ್ತಾವನೆಯೊಂದಿಗೆ ದೆಹಲಿಗೆ ಮತ್ತೊಮ್ಮೆ ಬರುತ್ತೇವೆ. ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣಕ್ಕೆ ಅರಣ್ಯ ಸಮಸ್ಯೆ ಇದೆ. ಒಂದು ಎಕರೆ ಜಮೀನು ಸಮಸ್ಯೆ ಇರಬಾರದು. ರಾಜ್ಯದಿಂದ ಸ್ಪಷ್ಟ ಪ್ರಸ್ತಾವನೆ ಬೇಕಾಗಿದ್ದು, ಸಿಎಂ ಸಿದ್ಧರಾಮಯ್ಯ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು. ಈ ವೇಳೆ  ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಸುನೀಲ್‌ ಹನುಮಣ್ಣವರ ಇದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by