ಕನ್ನಡ ನಾಡು | Kannada Naadu

ರಾಜ್ಯದಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಪಣ ಆಟವಾಡುವ, ಓದುವಂತಹ ಮಕ್ಕಳಿಂದ ದುಡಿಮೆ ಅಪೇಕ್ಷೆ ಸಲ್ಲದು - ಸಚಿವ ಸಂತೋಷ್ ಲಾಡ್

13 Jun, 2025

 

ಬೆಂಗಳೂರು : ರಾಜ್ಯದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಎಲ್ಲಾ ಅಧಿಕಾರಿಗಳು ಪಣತೊಡಬೇಕು. ಆಟವಾಡುವ, ಓದುವಂತಹ ಮಕ್ಕಳಿಂದ ದುಡಿಸಿಕೊಳ್ಳುವ ಅಪೇಕ್ಷೆಯನ್ನು ನಾವು ಮಾಡಬಾರದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.

ಇಂದು ಎಂ.ಜಿ.ರಸ್ತೆಯ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ (ರಿ), ಬೆಂಗಳೂರು ಹಾಗೂ ಬೆಂಗಳೂರು ನಗರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಆಯೋಜಿಸಿದ್ದ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಅಂಗವಾಗಿ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ  ಮಾತನಾಡಿದ ಅವರು, ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಆಚರಣೆಯು ವರ್ಷಕ್ಕೆ ಒಂದು ಬಾರಿ ಆಚರಿಸುವ ಕಾರ್ಯಕ್ರಮವಾಗಬಾರದು, ಪ್ರತಿ ಎರಡು ತಿಂಗಳಿಗೊಮ್ಮೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಬಾಲಕಾರ್ಮಿಕರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಡಾಬಾ, ಹೋಟೆಲ್, ಕಾರ್ಖಾನೆಗಳು, ಅಂಗಡಿಗಳು ಮತ್ತು ಮಾಲ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಬಾಲಕಾರ್ಮಿಕರನ್ನು ಗುರುತಿಸಿ ಅವರನ್ನು ಅಲ್ಲಿಂದ ಹೊರತಂದು ಅವರಿಗೆ ಶಿಕ್ಷಣದ ಅರಿವು ಮೂಡಿಸಿ ಶಾಲೆಗಳಿಗೆ ಕಳುಹಿಸುವಂತಾಗಬೇಕು. ಯಾರೂ ಸಹ ಶಿಕ್ಷಣದಿಂದ ವಂಚಿತರಾಗಬಾರದು. ಇದು ಸರ್ಕಾರದ ಪ್ರಮುಖ ಉದ್ದೇಶವು ಸಹ ಆಗಿದೆ ಎಂದು ತಿಳಿಸಿದರು.

ಬಾಲ ಹಾಗೂ ಕಿಶೋರ ಕಾರ್ಮಿಕರು ಅತಿಯಾಗಿ ಸಂಘ ಸಂಸ್ಥೆ ಮತ್ತು ಮಾಲೀಕರ ಸಂಘಗಳು ಬಲಿಷ್ಠವಿರದ ಪ್ರದೇಶದಲ್ಲಿ ಹಾಗೂ ಕಾರ್ಮಿಕ ನಿರೀಕ್ಷಕರು ತಲುಪಲು ಸಾಧ್ಯವಿಲ್ಲದ ಪ್ರದೇಶದಲ್ಲಿ ಹೆಚ್ಚಿಗೆ ಕಂಡುಬರುತ್ತಾರೆ. ಈ ರೀತಿಯ ಸನ್ನಿವೇಶಗಳು ಹೆಚ್ಚಾಗಿ ಸಣ್ಣ ಪ್ರಮಾಣದ ವರ್ಕ್ ಶಾಪ್ ಗಳಲ್ಲಿ ಅಥವಾ ಮನೆ ಆಧಾರಿತ ಉದ್ದಿಮೆಗಳಲ್ಲಿ ಹೆಚ್ಚಾಗುತ್ತಿದ್ದು, ಈ ರೀತಿಯ ಉದ್ದಿಮೆಗಳಲ್ಲಿ ದುಡಿಮೆ ಮಾಡುತ್ತಿರುವ ಬಾಲಕಾರ್ಮಿಕರನ್ನು ಪತ್ತೆಹಚ್ಚಿ ಅಂತಹವರನ್ನು ಗುರುತಿಸಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಅಸಮರ್ಪಕ ಶಿಕ್ಷಣ ಪದ್ಧತಿಯಿಂದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯ ಅಪಾಯ ಹೆಚ್ಚಾಗಿದೆ. ಸರ್ಕಾರವು ಈ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿರುತ್ತದೆ. ಯಾವುದೇ ದೇಶದ ಪ್ರತಿಯೊಬ್ಬ ಪ್ರಜೆಯು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ಪಿಡುಗನ್ನು ನಾಶಪಡಿಸಲು ಕ್ರಿಯಾಶೀಲವಾಗಿ ಭಾಗವಹಿಸದ ಹೊರತು ಸರ್ಕಾರದಿಂದ ಮಾತ್ರವೇ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಯಶಸ್ವಿಯಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಸಹ ಈ ಬಗ್ಗೆ ಗಮನಹರಿಸಿ ಸಹಕರಿಸಬೇಕು ಎಂದು ತಿಳಿಸಿದರು.

ಬಾಲ ಕಾರ್ಮಿಕ ಕ್ರಿಯಾ ಯೋಜನೆ ಕರ್ನಾಟಕ ಪ್ರಥಮ:

ಜಟಿಲವಾದ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಕರ್ನಾಟಕ ರಾಜ್ಯವು, ಹಲವು ವರ್ಷಗಳಿಂದ ತನ್ನ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಾ ಬಂದಿದ್ದು, ಬಹುಮಟ್ಟಿಗೆ ಯಶಸ್ವಿಯಾಗಿದೆ. 2001ರಲ್ಲಿ ರಾಜ್ಯ ಸರ್ಕಾರವು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ, "ಬಾಲ ಕಾರ್ಮಿಕ ಕ್ರಿಯಾ ಯೋಜನೆ" ಯನ್ನು ಜಾರಿಗೆ ತಂದಿದ್ದು, ದೇಶದಲ್ಲಿಯೇ ಪ್ರಥಮ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

 

 

ಬಾಲಕಾರ್ಮಿಕರಿಗೆ ಪುನರ್ವಸತಿ ವ್ಯವಸ್ಥೆಗೆ ಟಾಸ್ಕ್ ಪೋರ್ಸ್:

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಿ ಪುನರ್ವಸತಿಗೊಳಿಸಲು ಕಾರ್ಮಿಕ ಇಲಾಖೆಯು ಸೇರಿದಂತೆ 11 ಇಲಾಖೆಗಳಾದ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಖಾನೆಗಳ ಮತ್ತು ಬಾಯ್ಲರುಗಳ ಇಲಾಖೆ, ನಗರಾಭಿವೃದ್ಧಿ ಇಲಾಖೆ, ರೇμÉ್ಮ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ  ಅಧಿಕಾರಿಗಳನ್ನು ಪರಿವೀಕ್ಷಕರೊಂದಿಗೆ ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬಾಲಕಾರ್ಮಿಕರನ್ನು ಗುರುತಿಸಿ ಅರಿವು ಮೂಡಿಸುವುದರೊಂದಿಗೆ ಅವರಿಗೆ ಶೈಕ್ಷಣಿಕ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ. ಟಾಸ್ಕ್ ಪೋರ್ಸ್ ಸಮಿತಿ ಮತ್ತಷ್ಟು ಎಚ್ಚೆತ್ತುಕೊಂಡು ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಮುತುವರ್ಜಿ ವಹಿಸಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
 
ಬಾಲಕಾರ್ಮಿಕರಿಂದ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ:
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿμÉೀಧ ಮತ್ತು ನಿಯಂತ್ರಣ) ಕಾಯ್ದೆ, 1986ರ ತಿದ್ದುಪಡಿ ಕಾಯ್ದೆ, 2016 ರನ್ವಯ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ತಪ್ಪಿತಸ್ಥ ಮಾಲೀಕರಿಗೆ 6 ತಿಂಗಳಿನಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ, ರೂ. 20,000/- ರಿಂದ ರೂ. 50,000/-ರವರೆಗೆ ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ. ಬಾಲಕಾರ್ಮಿಕರು ಮತ್ತು ನಿμÉೀಧಿಸಲ್ಪಟ್ಟ ಕ್ಷೇತ್ರಗಳಲ್ಲಿ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳಲು ಅನುಮತಿಸಿದ್ದಲ್ಲಿ, ಅಂತಹ ತಂದೆ ತಾಯಿ ಹಾಗೂ ಪೆÇೀಷಕರಿಗೂ ದಂಡ ವಿಧಿಸಲಾಗುವುದು. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ. ಪೆÇೀಷಕರಾಗಿದ್ದಲ್ಲಿ ಲಘು ಶಿಕ್ಷೆ ಪ್ರಾವಧಾನವಿದ್ದು, ಪುನರಾವರ್ತಿತ ಅಪರಾಧಕ್ಕೆ             ರೂ. 10,000/- ಗಳ ದಂಡವನ್ನು ಸಕ್ಷಮ ನ್ಯಾಯಾಲಯವು ವಿಧಿಸಲಾಗುವುದು. ಇದು ಭಯದ ವಾತಾವರಣ ಮೂಡಿಸುವ ಉದ್ದೇಶವಲ್ಲ, ಸಮಾಜದಲ್ಲಿ ಬಾಲಕಾರ್ಮಿಕರಿಂದ ದುಡಿಸಿಕೊಳ್ಳದೇ, ಅವರಿಗೂ ಸಹ ಸೂಕ್ತ ಅವಕಾಶಗಳನ್ನು ಕಲ್ಪಿಸಿ ಮುಂದವರೆಯಲು ಜಾಗೃತಿ ಮೂಡಿಸುವ ಕ್ರಮವಾಗಿರುತ್ತದೆ ಎಂದು ತಿಳಿಸಿದರು.

ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರಿಂದ ದುಡಿಸಿಕೊಳ್ಳುವುದು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿμÉೀಧ ಮತ್ತು ನಿಯಂತ್ರಣ) ಪರಿಷ್ಕøತ ಕಾಯ್ದೆಯ ಕಲಂ 14ಎ ರನ್ವಯ ಸಂಜ್ಞೆಯ ಅಪರಾಧವಾಗಿದ್ದು, ಈ ನಿಟ್ಟಿನಲ್ಲಿ ಮೊಕದ್ದಮೆಗಳನ್ನು ಹೂಡಲು ರಾಜ್ಯದ ಪೆÇಲೀಸ್ ಮಹಾ ನಿರ್ದೇಶಕರು, ಪೆÇಲೀಸ್ ಆಯುಕ್ತರು, ಎಲ್ಲಾ ಜಿಲ್ಲೆಗಳ ಪೆÇಲೀಸ್ ವರಿμÁ್ಠಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಕಳೆದ ಮೂರು ವರ್ಷಗಳಲ್ಲಿ 1,02,213 ತಪಾಸಣೆ:

ಬಾಲ ಹಾಗೂ ಕಿಶೋರ ಕಾರ್ಮಿಕ ಕಾಯ್ದೆಯಡಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ 1,02,213 ತಪಾಸಣೆಗಳನ್ನು ನಡೆಸಲಾಗಿರುತ್ತದೆ. ಸುಮಾರು 2084 ಬಾಲಕಾರ್ಮಿಕರನ್ನು ಪತ್ತೆಹಚ್ಚಿ ಪುನರ್ವಸತಿ ಕಲ್ಪಿಸಲಾಗಿದೆ. 705 ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದರು.

ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ ವರದಿಯ ಪ್ರಕಾರ ಇಡೀ ವಿಶ್ವದಲ್ಲಿ 13 ಕೋಟಿ 80 ಲಕ್ಷ ಮಕ್ಕಳು ಬಾಲ ಕಾರ್ಮಿಕರಿದ್ದಾರೆ. ಭಾರತದಲ್ಲಿ 3 ಕೋಟಿ 30 ಲಕ್ಷ ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈ ಎಲ್ಲಾ ಅಂಕಿ-ಅಂಶಗಳನ್ನು ಗಮನಿಸಿದಾಗ ಮಾನವೀಯತೆ ಇಲ್ಲದ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ಸಹಾಯವಾಣಿ ಸ್ಥಾಪನೆ:

ಬಾಲಕಾರ್ಮಿಕರಿಂದ ದುಡಿಸಿಕೊಳ್ಳುವುದು ಕಂಡುಬಂದಲ್ಲಿ 24/7 ಸಹಾಯವಾಣಿ ಸಂಖ್ಯೆ 1098 ಕ್ಕೆ ಕರೆ ಮಾಡಿ ದೂರುಗಳನ್ನು ದಾಖಲಿಸಬಹುದು. ಈ ಸಂಬಂಧ ಎಲ್ಲಾ ಸಾರ್ವಜನಿಕರು ಸಹಕರಿಸಬೇಕು. ಈಗಾಗಲೇ ಸಹಾಯವಾಣಿಯಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಿಕೊಂಡಿದ್ದು, ಈ ಬಗ್ಗೆ ಕಾರ್ಮಿಕ ಇಲಾಖೆಯಿಂದ ಅಗತ್ಯ ಕ್ರಮಗಳನ್ನು ಸಹ ಜರುಗಿಸಲಾಗುತ್ತಿದೆ ಎಂದು ತಿಳಿಸಿದರು.

ಖ್ಯಾತ ಚಲನಚಿತ್ರ ನಟಿ ಶ್ರೀಮತಿ ಅದಿತಿ ಪ್ರಭುದೇವ ಅವರು ಮಾತನಾಡಿ, ಪ್ರತಿಯೊಬ್ಬ ಪ್ರಜೆಯೂ ತಮ್ಮ ಕರ್ತವ್ಯಗಳನ್ನು ಮರೆತು ಸರ್ಕಾರವನ್ನು ದೂಷಿಸಬಾರದು. ಸಮಾಜದಲ್ಲಿ ತುಂಬಾ ಸಣ್ಣ ಸಣ್ಣ ಬದಲಾವಣೆಗಳು, ಹೆಜ್ಜೆಗಳು ದೊಡ್ಡ ಮಟ್ಟದ ಬದಲಾವಣೆಗಳು ತರಲು ಸಾಧ್ಯವಾಗುತ್ತದೆ ಎಂದರು.

ಸಮಾಜದಲ್ಲಿ ಸುಮಾರು ಜನ ಮಕ್ಕಳನ್ನು ಓದಿಸುವುದಕ್ಕೆ ಕಷ್ಟವಾಗುತ್ತದೆ. ಶುಲ್ಕ ಭರಿಸಲು ಸಾಧ್ಯವಾಗುತ್ತಿಲ್ಲ  ಅಂತಹ ಮಕ್ಕಳಿಗೆ ಶುಲ್ಕ ಭರಿಸುವ ಮೂಲಕ ಮಾದರಿಯಾಗಬೇಕು. ಇಂತಹ ಚಿಕ್ಕ ಚಿಕ್ಕ ಬದಲಾವಣೆಗಳನ್ನು ತರುವ ಮೂಲಕ ಬಾಲ ಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ಮಗು ಸಹ ಈ ದೇಶದ ಪ್ರಜೆಯಾಗುತ್ತಾರೆ. ಅಂತಹ ಪ್ರಜೆಗಳನ್ನು ರೂಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಕಾರ್ಮಿಕ ಇಲಾಖೆಯ ಜಂಟಿ ಆಯುಕ್ತರಾದ ಡಾ.ಎನ್.ವಿ.ರವಿಕುಮಾರ್ ಅವರು ಮಾತನಾಡಿ, ಕಾರ್ಮಿಕ ಇಲಾಖೆಯ ಸಚಿವರು ಹಲವು ಪ್ರಥಮಗಳಿಗೆ ನಾಂದಿ ಹಾಕಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ’ ಯೋಜನೆ, ಗಿಗ್ ಕಾರ್ಮಿಕರಿಗೆ ಯೋಜನೆ ರೂಪಿಸಿ ಪ್ರತ್ಯೇಕವಾದ ಕಾಯ್ದೆಯನ್ನು ತಂದಿದ್ದಾರೆ. 30 ಲಕ್ಷ ಟ್ರಾನ್ಸ್‍ಪರ್ಡ್ ಅಲೈಡ್ ಕಾರ್ಮಿಕರಿಗೆ ಕಾಯ್ದೆ ಜಾರಿಗೆ, ಪತ್ರಿಕಾ ವಿತರಕರು, ಸಿನಿಮಾ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಯೋಜನೆ ರೂಪಿಸುವ ಮೂಲಕ ಕಾರ್ಮಿಕ ಸಮುದಾಯಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾರ್ಮಿಕ ಆಯುಕ್ತರಾದ ಡಾ.ಹೆಚ್.ಎನ್.ಗೋಪಾಲಕೃಷ್ಣ ಅವರು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಪ್ರಮಾಣ ವಚನ ಬೋಧಿಸಿದರು.

“ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಅಂಗವಾಗಿ ಜಾಗೃತಿ ಜಾಥಾಗೆ ಸಚಿವ ಸಂತೋಷ್ ಲಾಡ್ ಮತ್ತು ನಟಿ ಅದಿತಿ ಪ್ರಭುದೇವ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳಾದ ಶ್ರೀಮತಿ ಭಾರತಿ. ಡಿ, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ್, ಕಾರ್ಖಾನೆಗಳ ಮತ್ತು ಬಾಯ್ಲರುಗಳ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್,  ಕಾರ್ಮಿಕ ಅಧಿಕಾರಿಗಳಾದ ಶೇಖರ್ ಗಡದ್, ಮಂಜುಳ ಸೇರಿದಂತೆ ಮತ್ತಿತರ ಅಧಿಕಾರಿಗಳು, ಎನ್‍ಎಸ್.ಎಸ್., ಎನ್‍ಸಿಸಿ ವಿದ್ಯಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by