ಕನ್ನಡ ನಾಡು | Kannada Naadu

ಸೈನಿಕರಿಗಾಗಿ ವೀರ ಪರಿವಾರ ಸಹಾಯತಾ ಯೋಜನೆ ಹಾಗೂ ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಉದ್ಘಾಟನೆ

26 Jul, 2025

 

ಬೆಂಗಳೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ರಾಜ್ಯ ಮಂಡಳಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಹೊಸ ಯೋಜನೆಯಾದ “ವೀರ ಪರಿವಾರ ಸಹಾಯತಾ ಯೋಜನೆ-2025 ಹಾಗೂ ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಅನ್ನು ಸರ್ವೋಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರು ಹಾಗೂ ನವದೆಹಲಿಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಸೂರ್ಯ ಕಾಂತ್ ಅವರು ವರ್ಚುಯಲ್ ಮೂಲಕ ಉದ್ಘಾಟಿಸಿದರು.

 

ವರ್ಚುಯಲ್ ಮೂಲಕ ಸರ್ವೋಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಸೂರ್ಯ ಕಾಂತ್ ಅವರು ಮಾತನಾಡಿ, ಜಮ್ಮು ಕಾಶ್ಮೀರದಲ್ಲಿ ಜರುಗಿದ ಪ್ರಾದೇಶಿಕ ಸಮ್ಮೇಳನದ ಅಂಗವಾಗಿ ರಕ್ಷಣಾ ಸಿಬ್ಬಂದಿಗಳಿಗೆ, ಮಾಜಿ ಸೈನಿಕರಿಗೆ ಮತ್ತು ಅವರ ಕುಟುಂಬದವರಿಗೆ ಉಚಿತ ಮತ್ತು ಪರಿಣಾಮಕಾರಿ ಕಾನೂನು ಸೇವೆಯನ್ನು ಒದಗಿಸುವ ಸಲುವಾಗಿ ಈ ಹೊಸ ಯೋಜನೆಯನ್ನು ದೇಶದಾದ್ಯಂತ ಜಾರಿಗೆ ತರಲು ರೂಪಿಸಲಾಗಿದೆ ಎಂದರು.

ಬೆಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ರಾಜ್ಯ ಸೈನಿಕ ಮಂಡಳಿಯಲ್ಲಿ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದÀ ಅಧ್ಯಕ್ಷರಾದÀ ವಿಭು ಬಕ್ರು ಅವರು ಸಾಂಕೇತಿಕವಾಗಿ ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಅನ್ನು ಉದ್ಘಾಟಿಸಿದರು. ಈ ಸೇವೆಯು ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಕಾನೂನು ಸೇವೆ ಒದಗಿಸುವುದು ಈ ಕ್ಲಿನಿಕ್ ನ ಮುಖ್ಯ ಉದ್ದೇಶವಾಗಿದೆ.

ಈ ಸಂದರ್ಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀಮತಿ ಅನು ಶಿವರಾಮನ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್. ಶಶಿಧರ ಶೆಟ್ಟಿ, ಕರ್ನಾಟಕ ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರ ನಿರ್ದೇಶಕರಾದ ಫೈಟ್ ಲೆಫ್ಟಿನೆಂಟ್ ಎಂ.ಎಸ್. ಲೋಲಾಕ್ಷ ಅಧಿಕಾರಿಗಳು, ಮಾಜಿ ಸೈನಿಕರು ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by