ಬೆಂಗಳೂರು: ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗ ಬೆಂಗಳೂರಿನ ಭೇಟಿಗಾಗಿ ಇಂದು ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮಾಲ್ಡೀವ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಇಂಡಿಯಾ ಮಾಲ್ಡೀವ್ಸ್ ಹೈ ಕಮಿಷನರ್ ಮುನು ಮಹವರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ., ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ಎನ್. ಶಿವಶಂಕರ್ ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Publisher: ಕನ್ನಡ ನಾಡು | Kannada Naadu