ಕನ್ನಡ ನಾಡು | Kannada Naadu

ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯ ಜೊತೆ ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆಗಾಗಿ ಅರ್ಜಿ ಆಹ್ವಾನ

12 Oct, 2024



ಬೆಂಗಳೂರು, : ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಿಂದ ವಿಮಾದಾರರು ಮತ್ತು ಅವರ ಕುಟುಂಬದವರಿಗೆ ದ್ವಿತೀಯ ಹಂತದ ಚಿಕಿತ್ಸೆಯನ್ನು ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯ ಜೊತೆ ಖಾಸಗಿ ಆಸ್ಪತ್ರೆಗಳೊಂದಿಗೆ 2024 ಡಿಸೆಂಬರ್ 01 ರಿಂದ 2026ರ ನವೆಂಬರ್ 30 ರವರೆಗೆ 2 ವರ್ಷದ ಅವಧಿಗೆ ಹೊಂದಾಣಿಕೆ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಅಕ್ಟೋಬರ್ 30 ರ ಸಂಜೆ 5.30 ರೊಳಗೆ ಸಲ್ಲಿಸಬೇಕು. ಅರ್ಜಿ ನಮೂನೆಗಳನ್ನು ಪಡೆಯಲು ಮತ್ತು ಅರ್ಜಿಗಳನ್ನು ಸಲ್ಲಿಸಲು ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ನಿರ್ದೇಶನಲಯ, ಎಸ್. ನಿಜಲಿಂಗಪ್ಪ ರಸ್ತೆ, 2ನೇ ಬ್ಲಾಕ್ ರಾಜಾಜಿನಗರ, ಬೆಂಗಳೂರು – 560 010 ಅಥವಾ  ದೂರವಾಣಿ ಸಂಖ್ಯೆ: 080-23324216 ಅಥವಾ ಜಾಲತಾಣ https://esisms.karnataka.gov.in  ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು  ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Publisher: ಕನ್ನಡ ನಾಡು | Kannada Naadu

Login to Give your comment
Powered by