ಪುತ್ತೂರು: ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಅವರು ನಿರೀಕ್ಷೆಯಂತೆ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ.
ನಗರಸಭೆಯ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಅವರ ಪ್ರಥಮ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ನಡೆದಿತ್ತು. ಮಂಗಳವಾರ ನಡೆದ ನಗರಸಭೆಯ ಸಭಾಂಗಣದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭ ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಸ್ಥಾಯಿ ಸಮಿತಿ ಸದಸ್ಯರಾದ ಗೌರಿ ಬನ್ನೂರು, ಪ್ರೇಮ್ ಕುಮಾರ್, ಮೋಹಿನಿ, ಕೆ.ಸಂತೋಷ್ ಕುಮಾರ್, ದೀಕ್ಷಾ ಪೈ, ಮನೋಹರ್, ಪೂರ್ಣಿಮ, ರಮೇಶ್ ರೈ ನೆಲ್ಲಿಕಟ್ಟೆ ಉಪಸ್ಥಿತರಿದ್ದರು. ಪೌರಾಯುಕ್ತ ಮಧು ಎಸ್ ಮನೋಹರ್ ಅವರು ಚುನಾವಣಾಧಿಕಾರಿಯಾಗಿದ್ದರು. ನಗರಸಭೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡ ಸುಂದರ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ಹಾರೈಸಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರು, ಪ್ರಧಾನ ಕಾರ್ಯದರ್ಶಿಗಳಾದ ನಾಗೇಶ್ ಪ್ರಭು, ಅನಿಲ್ ತೆಂಕಿಲ, ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ಆರ್.ಸಿ.ನಾರಾಯಣ, ಚಂದ್ರಶೇಖರ್ ರಾವ್ ಬಪ್ಪಳಿಗೆ, ಬೂಡಿಯಾರ್ ರಾಧಾಕೃಷ್ಣ ರೈ, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ ಶುಭ ಹಾರೈಸಿದರು.
Publisher: ಕನ್ನಡ ನಾಡು | Kannada Naadu