ಕನ್ನಡ ನಾಡು | Kannada Naadu

ವಿಧಾನಪರಿಷತ್ತಿನ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ ವಚನ ಸ್ವೀಕಾರ

30 Oct, 2024



ಬೆಂಗಳೂರು, :  ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್‍ನ ನೂತನ ಸದಸ್ಯರಾಗಿ ಭಗವಂತ ಹಾಗೂ ತಾಯಿ ಭಾರತಾಂಬೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಪರಿಷತ್ತಿನ ಮಾನ್ಯ ಸಭಾಪತಿಗಳಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.


ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ವಿಧಾನಪರಿಷತ್‍ನ ಕಾರ್ಯದರ್ಶಿಗಳಾದ ಕೆ.ಆರ್.ಮಹಾಲಕ್ಷ್ಮಿ ಸೇರಿದಂತೆ ಶಾಸಕರು, ವಿಧಾನಪರಿಷತ್‍ನ ಸದಸ್ಯರು ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by