ಉಡುಪಿ: ದೇಶಕ್ಕೆ ಮಾದರಿಯಾಗಿರುವ “ಕರ್ನಾಟಕ ಮಾಡೆಲ್’ ಎಂದೇ ಬಿಂಬಿತವಾಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾರೋ ಒಂದಿಬ್ಬರು “ಶಕ್ತಿ’ ಯೋಜನೆಯನ್ನು ನಿಲ್ಲಿಸಿ ಎಂದಾಕ್ಷಣ ನಿಲ್ಲಿಸಲು ಸಾಧ್ಯವಿಲ್ಲ. ಅನುಕೂಲ ಇದ್ದವರು ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡುವುದನ್ನು ಬಿಡಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಗುರುವಾರ ಉಡುಪಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರಕಾರಕ್ಕೆ ಹೇಳಿದ ಕೂಡಲೇ ನಿಲ್ಲಿಸಲು ಸಾಧ್ಯವಿಲ್ಲ. ಶಕ್ತಿ ಯೋಜನೆ ಜಾರಿಯಾದ ಅನಂತರ ಸಾರಿಗೆ ಸಂಸ್ಥೆಯ ನಿಗಮಗಳು ಹೆಸರು ಪಡೆದಿವೆ ಮತ್ತು ಲಾಭದಲ್ಲಿವೆ. ಮಹಿಳೆಯರ ಪಾಲಿಗೆ ಶಕ್ತಿ ಯೋಜನೆ ಸಂಜೀವಿನಿಯಾಗಿದೆ ಎಂದು ಹೇಳಿದರು.
ಕೇಂದ್ರ ಸರಕಾರದ ಬೆಲೆ ಏರಿಕೆಯಿಂದ ಜನರು ರೋಸಿ ಹೋಗಿದ್ದರು. ಕಾಂಗ್ರೆಸ್ ಚುನಾವಣೆಗೂ ಪೂರ್ವದಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಜಾರಿಗೆ ತಂದಿದೆ. ಜನರ ಶ್ರೇಯೋಭಿವೃದ್ಧಿಗೆ ತಂದಿರುವ ಯಾವ ಯೋಜನೆಯನ್ನೂ ರದ್ದು ಮಾಡುವುದಿಲ್ಲ ಎಂದರು. ಜಾತಿಗಣತಿ ವಿಷಯಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳು ಆಯೋಗಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಜಾತಿ ಗಣತಿ ಬಗ್ಗೆ ಆದಷ್ಟು ಬೇಗ ಮುಖ್ಯಮಂತ್ರಿಯವರು ಪ್ರತಿಕ್ರಿಯಿಸಲಿದ್ದಾರೆ ಎಂದರು.

Publisher: ಕನ್ನಡ ನಾಡು | Kannada Naadu