ಕನ್ನಡ ನಾಡು | Kannada Naadu

ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ ಲಾಂಛನ ಅನಾವರಣ

02 Nov, 2024



ಬೆಂಗಳೂರು: ತುಮಕೂರಿನಲ್ಲಿ ನವೆಂಬರ್ 24ರಂದು ನಡೆಯಲಿರುವ ರಾಜ್ಯ ಪತ್ರಕರ್ತರ ಕ್ರೀಡಾಕೂಟದ ಲಾಂಛನವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಅನಾವರಣ ಮಾಡಿದರು.
ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದು ಶುಕ್ರವಾರ ಜರುಗಿದ ಜಿಲ್ಲಾ ರಾಜ್ಯೋತ್ಸವ ವೇದಿಕೆಯಲ್ಲಿ ಕ್ರೀಡಾ ಲಾಂಛನವನ್ನು ಅನಾವರಣ ಮಾಡಿದ್ದು ವಿಶೇಷ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ತುಮಕೂರು ಜಿಲ್ಲಾ ಘಟಕದ ಆತಿಥ್ಯದಲ್ಲಿ ಸಂಘಟಿಸುತ್ತಿರುವ ಕ್ರೀಡಾಕೂಟಕ್ಕೆ ಸಚಿವರು ಯಶಸ್ಸು ಕೋರಿದರು.
ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣ ಅತ್ಯಂತ ಸುಸಜ್ಜಿತವಾಗಿ ನವೀಕರಣಗೊಂಡಿದ್ದು, ಈ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯುತ್ತಿರುವುದು ಸಂತಸದ ಸಂಗತಿ. ಸದಾ ಕರ್ತವ್ಯ ಒತ್ತಡ ದಲ್ಲಿರುವ ಪತ್ರಕರ್ತರು ಒಂದು ದಿನದ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂತಸದ ಕ್ಷಣದ ನೆನಪುಗಳೊಂದಿಗೆ ಮರಳಬೇಕು. ಜಿಲ್ಲಾಡಳಿತ ದಿಂದ ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಚಿ.ನೀ.ಪುರುಷೋತ್ತಮ, ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್, ಆರ್.ರಾಜೇಂದ್ರ, ಡಿಸಿ ಶುಭಕಲ್ಯಾಣ್, ಸಿಇಓ ಜಿ.ಪ್ರಭು, ಎಸ್ಪಿ ಕೆ.ವಿ.ಅಶೋಕ್, ಆಯುಕ್ತೆ ಬಿ.ವಿ.ಅಶ್ವಿಜ, ಎಡಿಸಿ ತಿಪ್ಪೇಸ್ವಾಮಿ, ರಾಷ್ಟ್ರೀಯ ಮಂಡಳಿ ಸದಸ್ಯರಾದ ಟಿ.ಎನ್.ಮಧುಕರ್, ಡಿ.ಎಂ.ಸತೀಶ್, ಶಾಂತರಾಜು, ಕಾರ್ಯದರ್ಶಿ ಸತೀಶ್ ಹಾರೋಗೆರೆ ಮತ್ತು ಪದಾಧಿಕಾರಿಗಳು ನಿರ್ದೇಶಕರುಗಳು ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by