ಕನ್ನಡ ನಾಡು | Kannada Naadu

ನವೆಂಬರ್ 11 ರಂದು ವೀರವನಿತೆ ಒನಕೆ ಓಬವ್ವ ಜಯಂತಿ

08 Nov, 2024



ಬೆಂಗಳೂರು: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ವೀರವನಿತೆ “ಓಬವ್ವ ಜಯಂತಿ” ನವೆಂಬರ್ 11 ರಂದು ಬೆಳಿಗ್ಗೆ 12.30 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ಜಯಂತಿ ಅಂಗವಾಗಿ ಬೆಳಿಗ್ಗೆ 11 ಗಂಟೆಗೆ ಗಾಯನ ಮತ್ತು ಜನಪದ ಕಲಾಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಕಾರ್ಪೊರೇಟರ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್, ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಉದ್ಯೋಗ  ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶಿವರಾಜ ಎಸ್. ತಂಗಡಗಿ ಘನ ಉಪಸ್ಥಿತಿ ಇರಲಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಬಿ.ಗರುಡಾಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರುಮತ್ತಿತರ ಗಣ್ಯರು ಉಪಸ್ಥಿತರಿರಲಿದ್ದಾರೆ.

Publisher: ಕನ್ನಡ ನಾಡು | Kannada Naadu

Login to Give your comment
Powered by