ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡಿರುವ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.
ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವ ಕುರಿತು ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಅಧಿಕಾರಿಯೊಬ್ಬರು ಶುಕ್ರವಾರ ಮುಂಜಾನೆ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಚಿರತೆ ರಸ್ತೆ ದಾಟಿದೆ ಕೂಡಲೇ ಅಧಿಕಾರಿ ತನ್ನ ಮೊಬೈಲ್ ನಿಂದ ಚಿರತೆ ದೃಶ್ಯವನ್ನು ಸೆರೆ ಹಿಡಿದ್ದಿದ್ದಾರೆ, ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Publisher: ಕನ್ನಡ ನಾಡು | Kannada Naadu