ಉಡುಪಿ : ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹದ ಅಂಗವಾಗಿ ಅಜ್ಜರಕಾಡಿನ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋಂವಿದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯ ದಲ್ಲಿ ಶಾಲಾ ಮಕ್ಕಳಿಗಾಗಿ ನಡೆದ ವಿವಿಧ ಆಟೋಟ ಸ್ಪರ್ಧೆಗಳಿಗೆ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಶಾರದ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಸಂಗೀತ ಜಾನ್ಸನ್, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಗಿರಿಜಾ ಹೆಗ್ಡೆ ಗಾವಂಕರ್ ಉಪಸ್ಥಿತರಿದ್ದರು. ಸುಮಾರು 100ಕ್ಕೂ ಅಧಿಕ ಮಕ್ಕಳು ಸ್ಪರ್ದೆಯಲ್ಲಿ ಭಾಗವಹಿಸಿದ್ದರು. ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಪಾಲಕಿ ರಂಜಿತ ಸಿ. ಕಾರ್ಯಕ್ರಮ ನಿರೂಪಿಸಿ ಶಕುಂತಳಾ ಕುಂದರ್ ವಂದಿಸಿದರು
Publisher: ಕನ್ನಡ ನಾಡು | Kannada Naadu