ಉಡುಪಿ : ಶ್ರೀ ಕೃಷ್ಣ ಮುಖ್ಯ ಪ್ರಾಣರ ದರ್ಶನ ಮಾಡಿದ ರಾಜ್ಯಪಾಲರು ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಅನುಗ್ರಹ ಪ್ರಸಾದ ಪಡೆದರು. ಶ್ರೀಪಾದರ ಜಾಗತಿಕ ಮಟ್ಟದ ಧಾರ್ಮಿಕ ಆಂದೋಲನ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆಯನ್ನೂ ಪಡೆದರು. ಕರ್ನಾಟಕದ ಹರಿದಾಸರ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ರಾಜ್ಯಪಾಲರು ಉಡುಪಿಯ ಪ್ರಸಿದ್ಧ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣ ದರ್ಶನ ಪಡೆದು ಭಕ್ತ ಕನಕದಾಸರ ವಿಗ್ರಹಕ್ಕೆ ನಮಿಸಿದರು. ಉಡುಪಿಯಲ್ಲಿ ನಡೆಯುತ್ತಿರುವ ಶ್ರೀವಿಜಯದಾಸರ ಆರಾಧನೆ ಪ್ರಯುಕ್ತ ಶ್ರೀನಿವಾಸ ಕಲ್ಯಾಣೋತ್ಸವದಲ್ಲೂ ಪಾಲ್ಗೊಂಡರು.
Publisher: ಕನ್ನಡ ನಾಡು | Kannada Naadu