ಉಡುಪಿ : ಶ್ರೀ ವಿಜಯದಾಸರ ಆರಾಧನೆ ಅಂಗವಾಗಿ ನವೆಂಬರ್ 9ರಿಂದ 11ರವರೆಗೆ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಅಂತಾರಾಷ್ಟ್ರೀಯ ಹರಿದಾಸ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ಪರ್ಯಾಯ ಶ್ರೀ ಪುತ್ತಿಗೆ ಮಠದ ಸಹಯೋಗದೊಂದಿಗೆ ಉಡುಪಿಯ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ, ಬೆಂಗಳೂರಿನ ಶ್ರೀ ಶ್ರೀನಿವಾಸ ಉತ್ಸವ ಬಳಗ, ಕಲಬುರಗಿಯ ದಾಸ ಸೌರಭ ಟ್ರಸ್ಟ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಈ ಸಮ್ಮೇಳನ ಆಯೋಜಿಸಲಾಗಿದೆ.
9ರಂದು ಬೆಳಿಗ್ಗೆ 9-30ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಶ್ರೀ ಸುಶ್ರೀಂದ್ರತೀರ್ಥರು ಸಾನಿಧ್ಯ ವಹಿಸಲಿದ್ದು ಬೆಂಗಳೂರಿನ ಬೇಲಿಮಠದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ದಿಕ್ಸೂಚಿ ಭಾಷಣ ಮಾಡುವರು. ದಾಸಸಾಹಿತ್ಯ ಸಂಶೋಧಕ ಡಾ. ಎ.ಬಿ. ಶ್ಯಾಮಾಚಾರ್ಯರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಖ್ಯಾತ ಗಾಯಕ, ನಿವೃತ್ತ ಐಎಎಸ್ ಅಧಿಕಾರಿ ಡಾ. ಮುದ್ದುಮೋಹನ್ ಮುಖ್ಯ ಅತಿಥಿಯಾಗಿ ಆಗಮಿಸುವರು.
ದಿ. 10ರಂದು ಬೆಳಿಗ್ಗೆ 9 ಗಂಟೆಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಸಹಸ್ರಕಂಠ ಬೃಹತ್ ಗೋಷ್ಠಿ ಗಾಯನ ಕಾರ್ಯಕ್ರಮ ನಡೆಯಲಿದೆ. 11ರಂದು ಬೆಳಿಗ್ಗೆ 7 ಗಂಟೆಗೆ ಯಾಯಿವಾರ, ನಗರ ಸಂಕೀರ್ತನೆ, ಮಧ್ಯಾಹ್ನ 3ಕ್ಕೆ ಪ್ರಬಂಧಗಳ ಮಂಡನೆ, 5ಕ್ಕೆ ಉಡುಪಿಯ ರಥಬೀದಿಯಲ್ಲಿ ಶ್ರೀನಿವಾಸ ದೇವರ ಮತ್ತು ವಿಜಯದಾಸರ ಶೋಭಾಯಾತ್ರೆ, 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ನಿರ್ದೇಶಕ ಡಾ. ಬಿ. ಗೋಪಾಲ ಆಚಾರ್ಯ, ಶ್ರೀ ಶ್ರೀನಿವಾಸ ಉತ್ಸವ ಬಳಗದ ಸಂಸ್ಥಾಪಕ ಅಧ್ಯಕ್ಷ ಡಾ. ವಾದಿರಾಜ ತಾಯಲೂರು, ಸಂಸ್ಕøತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ, ಪಾಂಡುರಂಗರಾವ ಕಂಪ್ಲಿ ಕೋರಿದ್ದಾರೆ.
Publisher: ಕನ್ನಡ ನಾಡು | Kannada Naadu