ಕನ್ನಡ ನಾಡು | Kannada Naadu

ನ.13ರಂದು ಮಿನಿ ಉದ್ಯೋಗ ಮೇಳ

11 Nov, 2024



 ಉಡುಪಿ,: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 13ರಂದು ಬೆಳಗ್ಗೆ 10:30ರಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್, (ಕಂಪ್ಲಿಟೇಡ್ ಪೋಟೋಶಾಪ್ ಕೋರ್ಸ್) ಮತ್ತು ಡಿಪ್ಲ್ರೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿ ಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸ ಬಹುದು.    ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ. 
    

Publisher: ಕನ್ನಡ ನಾಡು | Kannada Naadu

Login to Give your comment
Powered by