ಕನ್ನಡ ನಾಡು | Kannada Naadu

ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟದ ಲಾಂಛನ ಅನಾವರಣ ಮಾಡಿದ ಶಾಲಿನಿ ರಜನೀಶ್

21 Nov, 2024

 
ಬೆಂಗಳೂರು:  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ಜಿಲ್ಲಾ ಸಂಘ ಮತ್ತು ಜಿಲ್ಲಾಡಳಿತ ತುಮಕೂರು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯ ಮಟ್ಟದ ಕ್ರೀಡಾಕೂಟದ ಲಾಂಛನವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಅನಾವರಣ ಮಾಡಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಸದಾ ಒತ್ತಡದಲ್ಲಿರುವ ಪತ್ರಕರ್ತರು ರಾಜ್ಯ ಮಟ್ಟದ ಕ್ರೀಡಾಕೂಟ ಮಾಡುತ್ತಿರುವುದು ವಿಶೇಷ. ತುಮಕೂರು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ. ಸಾಧ್ಯವಾದಲ್ಲಿ ನಾನೂ ಕೂಡ ಭಾಗವಹಿಸುತ್ತೇನೆ ಎಂದು ಹೇಳಿದರು.
ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮುಖ್ಯ ಕಾರ್ಯದರ್ಶಿಗಳನ್ನು ಕ್ರೀಡಾಕೂಟಕ್ಕೆ ಆಹ್ವಾನಿಸಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ಹಾಗೂ ರಾಷ್ಟ್ರೀಯ ಮಂಡಳಿ ಸದಸ್ಯರಾದ ಅನು ಶಾಂತರಾಜು, ಟಿ.ಎನ್.ಮಧುಕರ್, ಡಿ.ಎಂ.ಸತೀಶ್, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಹಿಮಂತರಾಜು ಕ್ರೀಡಾ ಸಮಿತಿ ಮುಖ್ಯ ಸಂಚಾಲಕರಾದ ಸತೀಶ್ ಹಾರೋಗೆರೆ, ಯಶಸ್ ಪದ್ಮನಾಭ್, ಎಸ್.ಹರೀಶ್ ಆಚಾರ್ಯ ಹಾಜರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by