ಕನ್ನಡ ನಾಡು | Kannada Naadu

ಕೇಂದ್ರ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

22 Nov, 2024


ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಕೇಂದ್ರ ಸರ್ಕಾರದ ಹಣಕಾಸು ಮಂತ್ರಿಗಳಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ  ನಬಾರ್ಡ್ ನೆರವು ಕಡಿತಗೊಳಿಸದಂತೆ ಮನವಿ ಮಾಡಿದರು.
ಕಳೆದ ಸಾಲಿನಲ್ಲಿ  ನಬಾರ್ಡ್ ನೆರವು 5400 ಕೋಟಿ ರೂಪಾಯಿಗಳಷ್ಟಿದ್ದು, ಈ ಬಾರಿ  2400   ಕೋಟಿ ರೂಗಳಿಗೆ ಕಡಿತಗೊಳಿಸಲಾಗಿದೆ. ಈ ಕುರಿತು ನಿರ್ಮಲಾ ಸೀತಾರಾಮನ್ ಅವರ ಗಮನ ಸೆಳೆದು  ಈ ವ್ಯತ್ಯಾಸವನ್ನು ಸರಿಪಡಿಸಲು  ಕೋರಿದರು.

ಈ ನಿಯೋಗದಲ್ಲಿ  ಸಚಿವರಾದ ಬೈರತಿ ಸುರೇಶ್, ಚೆಲುವರಾಯಸ್ವಾಮಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೆÇನ್ನಣ್ಣ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ಶಾಸಕರು ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by