ಕನ್ನಡ ನಾಡು | Kannada Naadu

ಇಂದಿರಾನಗರ: ಜನಸಂಪರ್ಕ ಸಭೆ

07 Dec, 2024

 ಉಡುಪಿ ನಗರಸಭೆಯ ಇಂದಿರಾನಗರ ನಗರ ವಾರ್ಡಿನಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಸಭೆಯಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಕಲ್ಮಾಡಿ, ಉಡುಪಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಇಂದಿರಾನಗರ ವಾರ್ಡಿನ ನಗರಸಭಾ ಸದಸ್ಯರಾದ ಚಂದ್ರಶೇಖರ ಶೇರಿಗಾರ್, ನಗರಸಭಾ ಸದಸ್ಯರಾದ ಹರೀಶ್ ಶೆಟ್ಟಿ, ಬಾಲಕೃಷ್ಣ ಡಿ. ಶೆಟ್ಟಿ, ವಿಜಯಲಕ್ಷ್ಮೀ, ವಿಶ್ವಕರ್ಮ ಸೇವಾ ಸಂಘ ಚಿಟ್ಪಾಡಿ ಅಧ್ಯಕ್ಷರಾದ ಶೇಖರ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by