ಕನ್ನಡ ನಾಡು | Kannada Naadu

ಜನವರಿ 7 ರಿಂದ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

22 Dec, 2024

 

ಬೆಂಗಳೂರು, :  ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು "Exploring Nature's Pharmacy: Potential of Medicinal and Aromatic Plants and Their Conservation" ವಿಷಯದ ಮೇಲೆ 2025 ಜನವರಿ 7 ರಿಂದ 9 ರ ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ.

ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ  ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದೆ. ಅಲ್ಲದೇ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧವನ್ನು ಮಂಡಿಸಲು ಸಹ ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾದ ಸಂಶೋಧನಾ ಪ್ರಬಂಧಗಳಿಗೆ ನಗದು ಬಹುಮಾನ ನೀಡಲಾಗುವುದು.

ಆಸಕ್ತ ಪ್ರತಿನಿಧಿಗಳು ಡಿಸೆಂಬರ್ 31 ರೊಳಗಾಗಿ ಗೂಗಲ್ ಫಾರಂ- https://forms.gle/JochVVLYyNBHKtdx7  ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಧಿಕಾರಿಗಳ ಮೊ.ಸಂ. 9880405181, 9880405181 ಮತ್ತು 9686449019 ಅಥವಾ ಅಕಾಡೆಮಿಯ ವೆಬ್‍ಸೈಟ್  http://kstacademy.in   ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ. ಎಂ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Publisher: ಕನ್ನಡ ನಾಡು | Kannada Naadu

Login to Give your comment
Powered by