ಬೆಂಗಳೂರು: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ 2024-25ನೇ ಸಾಲಿನ "ಸಂಯಮ ಪ್ರಶಸ್ತಿ"ಗೆ ಅರ್ಜಿ ಆಹ್ವಾನಿಸಿದೆ.
ವ್ಯಸನ ಮುಕ್ತ ಸಮಾಜ ನಿರ್ಮಾಣ. ಮದ್ಯ ಮತ್ತು ಮಾದಕ ವಸ್ತುಗಳಿಂದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಮದ್ಯ ವ್ಯಸನಗಳನ್ನು ಗುರುತಿಸಿ ಅವರಗಳ ಜೀವನ ಪರಿವರ್ತನೆಗಾಗಿ ಮತ್ತು ಪುನಃ ವಸತಿಗಳಿಗಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಆಸಕ್ತಿಯುಳ್ಳ ವ್ಯಕ್ತಿ ಹಾಗೂ ಸಂಘ ಸಂಸ್ಥೆಗಳಿಗೆ 2025ರ ಜನವರಿ 15 ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಅರ್ಜಿಯನ್ನು ಇ-ಮೇಲ್ ವಿಳಾಸ kar.temperance@gmail.com ಹಾಗೂ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ. ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು- 560 001 ಗೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Publisher: ಕನ್ನಡ ನಾಡು | Kannada Naadu