ಬೆಳಗಾವಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಉದ್ಘಾಟಿಸಿದರು.
ನಂತರ ಮುಖ್ಯಮಂತ್ರಿಗಳು ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಸುತ್ತಾಡಿದರು ಹಾಗೂ ಭವನದಲ್ಲಿ ಅಳವಡಿಸಲಾಗಿರುವ ಫೋಟೋ ಗ್ಯಾಲರಿಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷರು ಹಾಗೂ ಸಚಿವರಾದ ಎಚ್.ಕೆ.ಪಾಟೀಲ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ದಿನೇಶ್ ಗುಂಡೂರಾವ್, ಭೈರತಿ ಸುರೇಶ, ಶಾಸಕರಾದ ಅಶೋಕ್ ಪಟ್ಟಣ ಸೇರಿದಂತೆ ಸಚಿವರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Publisher: ಕನ್ನಡ ನಾಡು | Kannada Naadu