ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ.
ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ.
ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸನ್ಮಾನ್ಯ ಮುಖ್ಯ ಮಂತ್ರಿಗಳು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ರವರ ನಿಧನಕ್ಕೆ - ಸಚಿವ ಕೆ.ಹೆಚ್. ಮುನಿಯಪ್ಪ ಸಂತಾಪ
ಬೆಂಗಳೂರು: ಸರಳ ಸಜ್ಜನಿಕೆ ರಾಜಕಾರಣಿ ಮಾಜಿ ಪ್ರಧಾನ ಮಂತ್ರಿ ಡಾ.ಮನಮೋಹನ್ ಸಿಂಗ್ ರವರ ನಿಧನದ ಸುದ್ದಿ ತೀವ್ರ ನೋವನ್ನುಂಟು ಮಾಡಿದೆ. ನಾನು ಅವರೊಂದಿಗೆ ಕೆಲಸ ಮಾಡಿದ್ದು ಸರಳ ಸಜ್ಜನಿಕೆಯಿಂದ ಇಲಾಖೆಯ ಯಾವುದೇ ವಿಷಯಗಳಿರಲಿ ಆದೇಶ ಕೊಡುತ್ತಿರಲ್ಲಿ ಸಾಧ್ಯವಾದರೆ ಮಾಡಬಹುದಾ ನೋಡಿ ಎನ್ನುತ್ತಿದ್ದರು.
ಪಿ.ವಿ.ನರಸಿಂಹರಾವ್ ರವರು ಪ್ರಧಾನಿಯಾಗಿದ್ದಾಗ ಅವರು ಹಣಕಾಸು ಸಚಿವರಾಗಿ ಈ ದೇಶಕ್ಕೆ ತನ್ನದೆ ಆದ ಶೈಲಿಯಲ್ಲಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದರು. ನ್ಯಾಷನಲ್ ಪುಡ್ ಸೆಕ್ಯೂರಿಟಿ ಆಕ್ಟ್, ಮನ್ರೇಗಾ ,ಮೊದಲಾದ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಒತ್ತನ್ನು ನೀಡುತ್ತಿದ್ದರು
ಸೌಮ್ಯ ಸರಳ ಸಜ್ಜನಿಕೆ ರಾಜಕಾರಣಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ.
ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ.
ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಗಲಿಕೆಗೆ ಕೃಷಿ ಸಚಿವರ ಸಂತಾಪ
ಬೆಂಗಳೂರು: ದೇಶ ಕಂಡ ಅತ್ಯುತ್ತಮ ಪ್ರಧಾನ ಮಂತ್ರಿಗಳಲ್ಲಿ ಒಬ್ಬರಾದ ಆರ್ಥಿಕ ತಜ್ಞ, ಸುಧಾರಕ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಆಘಾತ ಉಂಟು ಮಾಡಿದೆ.
ಹಣಕಾಸು ಸಚಿವರಾಗಿ ಹಾಗೂ ಹಾಗೂ 10 ವರ್ಷಗಳ ಕಾಲ ಪ್ರಧಾನಿಯಾಗಿ ಅವರು ಜಾರಿಗೆ ತಂದ ಉದಾರಿಕರಣ ಸೇರಿದಂತೆ ಹಲವು ಆರ್ಥಿಕ ಸುಧಾರಣಾ ಕ್ರಮಗಳು ಇಂದಿಗೂ ದೇಶದ ಹಣಕಾಸಿನ ಸದೃಡತೆಗೆ ನೆರವಾಗಿವೆ.ಜೊತೆಗೆ ಜಾಗತಿಕ ಮನ್ನಣೆಗೆ ಪಾತ್ರವಾಗಿವೆ.
ಭಾರತದ ಆರ್ಥಿಕ ಇತಿಹಾಸದಲ್ಲಿ ಡಾ ಮನಮೋಹನ್ ಸಿಂಗ್ ಅವರ ಹೆಸರು ಎಂದೆಂದಿಗೂ ಚಿರಸ್ಥಾಯಿಯಾಗಿ ಉಳಿಯಲಿzದೆ. ವಿದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ, ಅಲ್ಲಿನ ಬ್ಯಾಂಕ್‍ಗಳು ಮುಚ್ಚುತ್ತಿದ್ದಾಗ ನಮ್ಮ ದೇಶದ ಬ್ಯಾಂಕುಗಳು ಸಶಕ್ತವಾಗುತ್ತಾ ಸಾಗಿ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು ಸ್ಮರಣೀಯ.
ಅತ್ಯಂತ ಮಿತ ಭಾಷಿಯಾದರೂ ಕ್ಷಿಷ್ಟ ಸಂದರ್ಭದಲ್ಲಿ ವಿಚಲಿತರಾಗದೆ ಸ್ಪಷ್ಟ, ಕಠಿಣ ನಿರ್ಧಾರಗಳನ್ನು ಕೈಗೊಳ್ಳುವ ಸಾಮಥ್ರ್ಯ ಹೊಂದಿದ್ದ ಮನಮೋಹನ್ ಸಿಂಗ್ ಅವರು ದಕ್ಷ ಆಡಳಿತಗಾರರೂ ಆಗಿದ್ದರು.
ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಎರೆಡು ಬಾರಿ ಪ್ರಧಾನ ಮಂತ್ರಿಯಾಗಿದ್ದಾಗಲೂ ಅವರು ಅನುಸರಿಸಿದ ವಿದೇಶಾಂಗ ನೀತಿ, ದಿಟ್ಟ ನಿರ್ಧಾರಗಳು ಜಾಗತಿಕ ಮಟ್ಟದಲ್ಲಿ ಭಾರತದ ಇಮೇಜು ಬದಲಿಸಲು ಹಾದಿ ಮಾಡಿಕೊಟ್ಟಿದೆ. ಭಾರತ ಇಂದು ಒಂದು ಬಲಿಷ್ಟ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾತ್ರ ಅಪಾರ.
ಕೇವಲ ಆರ್ಥಿಕ ತಜ್ಞ ಮಾತ್ರವಲ್ಲದೆ, ಬೋಧಕರಾಗಿ, ಸಚಿವಾಲಯದ ಅಧಿಕಾರಿಯಾಗಿಯೂ ಮೆಚ್ಚುಗೆಗೆ ಪಾತ್ರವಾಗಿದ್ದ ಮನಮೋಹನ್ ಸಿಂಗ್ 30 ವರ್ಷಗಳ ಕಾಲ ರಾಜ್ಯಸಭೆ ಸದಸ್ಯರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ.
ಡಾ. ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಕುಟುಂಬಕ್ಕೆ, ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಬರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ವಿಧಿವಶ - ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಸಂತಾಪ
ಬೆಂಗಳೂರು : ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞರು, ಉದಾರೀಕರಣ & ಜಾಗತೀಕರಣದ ಮೂಲಕ ರಾಷ್ಟ್ರದ ಅರ್ಥವ್ಯವಸ್ಥೆಗೆ ಹೊಸ ಭಾಷ್ಯ ಬರೆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಮಂತ್ರಿಗಳಾಗಿದ್ದಾಗ, ಈ ದೇಶಕ್ಕೆ ಕೊಟ್ಟ ಯೋಜನೆಗಳು ಈಗಲೂ ಅವಿಸ್ಮರಣೀಯ. ಸಂಸತ್ತಿನಲ್ಲಿ ಅವರ ಕೊನೆಯ ಮಾತುಗಳು ನೋಟು ಅಮಾನ್ಯೀಕರಣದ ವಿರುದ್ಧ ಬಲವಾದ ಟೀಕೆಯಾಗಿತ್ತು, ಇದನ್ನು "ಅನುಮೋದಿತ ಮತ್ತು ಕಾನೂನುಬದ್ಧ ದಾಳಿ" ಎಂದು ಅವರು ವಿವರಿಸಿದ್ದು ಎಂದು ಮರೆಯಲಾಗದು.
ದೇಶದ ಅರ್ಥ ವ್ಯವಸ್ಥೆಗೆ ಹೊಸ ದಿಕ್ಕು ತೋರಿದ ಮಹಾನ್ ಚೇತನಕ್ಕೆ ಭಾವಪೂರ್ಣ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಾರತದ ಆರ್ಥಿಕತೆಯ ಹರಿಕಾರ : ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್
ಬೆಂಗಳೂರು : ಭಾರತದ ಸದೃಢ ಆರ್ಥಿಕತೆಯ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ದಿಂದ ದೇಶ ಒಬ್ಬ ಅಪ್ರತಿಮ ಅರ್ಥಶಾಸ್ತ್ರಜ್ಞ ಹಾಗೂ ಆಡಳಿತಗಾರರನ್ನು ಕಳೆದುಕೊಂಡಂತಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಕಂಬನಿ ಮಿಡಿದಿದ್ದಾರೆ.
ಪ್ರಧಾನಿ ಆಗುವ ಮುನ್ನ ವಿಶ್ವದ ಅತ್ಯುತ್ತಮ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಭಾರತೀಯ ರಿಸರ್ವ್ ಬ್ಯಾಂಕ್‍ನ ಗವರ್ನರ್ ಆಗಿ, ಹಣಕಾಸು ಇಲಾಖೆ ಕಾರ್ಯದರ್ಶಿಯಾಗಿ, ಪ್ರಧಾನಿ ಮಂತ್ರಿಯ ಸಲಹೆಗಾರರಾಗಿ ಕಾರ್ಯನಿರ್ವಹಿಸುವುದರ ಮೂಲಕ ಭಾರತದ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಿಸಿದವರು.
90 ರ ದಶಕದಲ್ಲಿ ಉದಾರಿಕರಣ ಮತ್ತು ಜಾಗತೀಕರಣದ ವ್ಯಾಪ್ತಿಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆಯನ್ನು ಹೊಸ ದಿಕ್ಕಿಗೆ ತಂದಂತಹ ಅಪ್ರತಿಮ ಮೇಧಾವಿ. ಸರಳ ಸಜ್ಜನಿಕೆಯ ಪ್ರತೀಕವಾಗಿದ್ದ ಡಾಕ್ಟರ್ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖ ತಪ್ತರಾಗಿರುವ ಅವರ ಕುಟುಂಬಕ್ಕೆ ಭಗವಂತನು ಶಾಂತಿ, ನೆಮ್ಮದಿ ಹಾಗೂ ದುಃಖವನ್ನು ಸಂತೈಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ.
Publisher: ಕನ್ನಡ ನಾಡು | Kannada Naadu