ಕನ್ನಡ ನಾಡು | Kannada Naadu

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಆಯ್ಕೆ ಸಮಿತಿ ರಚನೆ ಮಾಡಿ ಸರ್ಕಾರ ಆದೇಶ ತಗಡೂರು, ಚಂದ್ರು, ನಾಯಕ್, ಬಂಡಿಹಾಳ್ ನೇಮಕ

08 Jan, 2025

 

 ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ರಾಜ್ಯ ಮಟ್ಟದಲ್ಲಿ ಆಯ್ಕೆ ಸಮಿತಿಯನ್ನು ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ.
ಗ್ರಾಮೀಣ ಭಾಗದ ಪತ್ರಕರ್ತರುಗಳು ವೃತ್ತಿಪರವಾದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ  ಆಯಾ ಜಿಲ್ಲೆಯೊಳಗೆ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲು ಸರ್ಕಾರ ಉದ್ದೇಶಿಸಿದೆ.
ದಾವಣಗೆರೆಯಲ್ಲಿ ೆ.3ರಂದು ನಡೆದಿದ್ದ 38ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ಹಕ್ಕೋತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ನೀಡುವುದಾಗಿ ಭರವಸೆ ನೀಡಿದ್ದು, ಅಂತೆಯೇ ಬಜೆಟ್‌ನಲ್ಲಿಯೂ ೋಷಿಸಿದ್ದರು.
ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಮೊದಲು ಬಸ್ ಪಾಸ್ ನೀಡಲು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ಈ ಸಂಬಂಧ ರಾಜ್ಯ ಮಟ್ಟದ ಆಯ್ಕೆ ಸಮಿತಿ ರಚನೆ ಮಾಡಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸ್ವಾಗತಿಸಿದೆ. ಗ್ರಾಮೀಣ ಬಸ್ ಪಾಸ್ ಜಾರಿಗೆ ನೀಡಲು ಕ್ರಮ ಕೈಗೊಂಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮತ್ತು ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್ ಅವರನ್ನು ಅಭಿನಂದಿಸಿದೆ.

ಆಯ್ಕೆ ಸಮಿತಿಗೆ ನೇಮಕ:
ಗ್ರಾಮೀಣ ಪತ್ರಕರ್ತರಿಗೆ ಉಚಿತವಾಗಿ ಬಸ್ ಪಾಸ್ ನೀಡಲು ರಚಿಸಲಾಗಿರುವ ಆಯ್ಕೆ ಸಮಿತಿಗೆ ವಾರ್ತಾ ಇಲಾಖೆ ಆಯುಕ್ತರು ಅಧ್ಯಕ್ಷರಾಗಿದ್ದು ಮತ್ತು ಜಂಟಿ ನಿರ್ದೇಶಕರು ಸದಸ್ಯರಾಗಿ ಹಾಗೂ ವಾರ್ತಾ ಇಲಾಖೆ ಉಪ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.
ಸದಸ್ಯರುಗಳಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್,  ಹಿರಿಯ ಪತ್ರಕರ್ತರಾದ ಎಂ.ಚಂದ್ರಶೇಖರ್, ಪೋಟೋ ಜರ್ನಲಿಸ್ಟ್ ಮೋಹನ್ ಕುಮಾರ್, ಕೋಲಾರದ ವಾಸ್ತವ ಕರ್ನಾಟಕ ಪತ್ರಿಕೆಯ ಎಚ್.ಎಲ್.ಸುರೇಶ್, ಗಂಗಾವತಿಯ ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಗಂಗಾಧರ ಬಂಡಿಹಾಳ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕೆಯುಡಬ್ಲೂಜೆ ಅಭಿನಂದನೆ:
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ರಚನೆ ಮಾಡಿರುವ ರಾಜ್ಯ ಮಟ್ಟದ ಆಯ್ಕೆ ಸಮಿತಿಗೆ ನೇಮಕಗೊಂಡಿರುವ ಸದಸ್ಯರುಗಳಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಅಭಿನಂದಿಸಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by