ಬೆಂಗಳೂರು :
ಸಾವಯವ ರಸಾಯನಶಾಸ್ತ್ರ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಹೊಸ ಆವಿಷ್ಕಾರಗಳನ್ನು ಮಾಡುವಲ್ಲಿ ಸಹಕಾರಿ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಉಚ್ಚತರ್ ಶಿಕ್ಷಾ ಅಭಿಯಾನದಿಂದ ಅನುದಾನಿತ ಮಾಳವೀಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮೈಸೂರು ವಿಶ್ವವಿದ್ಯಾನಿಲಯದ ಸಾವಯವ ರಸಾಯನಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಜನವರಿ 6 ಮತ್ತು 7 ರಂದು "ಸಾವಯವ ರಸಾಯನಶಾಸ್ತ್ರದಲ್ಲಿನ ಇತ್ತೀಚಿನ ಪ್ರಗತಿಗಳು" ವಿಷಯದ ಕುರಿತು 2 ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಪೆÇ್ರ.ಕೆ.ಎಸ್.ರಂಗಪ್ಪ ಅವರು ಮಾತನಾಡಿ, ಕ್ಯಾನ್ಸರ್ ವಿರುದ್ಧದ ಔಷಧ ಅಭಿವೃದ್ಧಿಯಲ್ಲಿ ನಡೆಯುತ್ತಿರುವ ಮುಂದುವರಿದ ಸಂಶೋಧನೆಗಳ ಒಳನೋಟವನ್ನು ನೀಡಿದರು.
ರಾಯಲ್ ಸೊಸೈಟಿ ಆಫ್ ಕೆಮಿಸ್ಟ್ರ ಜರ್ನಲ್ ಸಂಪಾದಕ ಮತ್ತು ಹೈದ್ರಾಬಾದ್ ವಿಶ್ವವಿದ್ಯಾನಿಲಯದ ಪ್ರಸಿದ್ಧ ವಿಜ್ಞಾನಿ ಪ್ರೊ. ಅಖಿಲಾ ಕುಮಾರ್ ಸಾಹೂ ಅವರು ಮಾತನಾಡಿ, ರಸಾಯನಶಾಸ್ತ್ರ ಜಗತ್ತಿಗೆ ಹೊಸ ರಿವರ್ಸ್-ಉಂಪೆÇಲುಂಗ್ ರಸಾಯನಶಾಸ್ತ್ರ ಬಗ್ಗೆ ಮಾತನಾಡಿದರು.
ಜೆಎಸ್ಎಸ್ ವಿಶ್ವವಿದ್ಯಾಲಯದ ಪ್ರೊ..ಸುಬ್ಬರಾವ್ ವಿ.ಎಂ ಅವರು, ಕ್ಯಾನ್ಸರ್ ಕೋಶಗಳನ್ನು ಪ್ರಯೋಗಶಾಲೆಯಲ್ಲಿ ಬೆಳವಣಿಗೆ ಮತ್ತು ಔಷಧ ಅಭಿವೃದ್ಧಿ ಕುರಿತು ಮಾತನಾಡಿದರು.
ಬೆಂಗಳೂರು ವಿಶ್ವವಿದ್ಯಾಲಯದ ಪೆÇ್ರ.ಗಂಗಾ ಪೆರಿಯಸಾಮಿ ಅವರು ಕಂಪ್ಯೂಟರ್ ಆಧಾರಿತ ರಸಾಯನ ವಿಜ್ಞಾನ ಮತ್ತು ಕರೋನಾ ವಿರೋಧಿ ಔಷಧ ಅಭಿವೃದ್ಧಿ ಕುರಿತು ಉಪನ್ಯಾಸ ನೀಡಿದರು.
ಉಪನ್ಯಾಸಗಳ ಸರಣಿಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಡಾ.ಆರ್. ಶೋಬಿತ್ ಅವರು ಸಮ್ಮೇಳನದ 50 ಶಿಭಿರಾರ್ಥಿಗಳಿಗೆ ಭಾಗವಹಿಸುವಿಕೆಯ ಪ್ರಮಾಣಪತ್ರವನ್ನು ವಿತರಿಸಿದರು.
ಸಾವಯವ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಕಾರ್ಯಕ್ರಮದ ಅಧ್ಯಕ್ಷ ಡಾ.ಬಸಪ್ಪ ಅವರ ಸ್ವಾಗತ ಭಾಷಣ ಮಾಡಿದರು. ಸಮ್ಮೇಳನದಲ್ಲಿ ಸುಮಾರು 100 ವಿದ್ಯಾರ್ಥಿಗಳು ಭಾಗವಹಿಸಿದ್ದರು.
Publisher: ಕನ್ನಡ ನಾಡು | Kannada Naadu