ಬೆಂಗಳೂರು,: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಮನೆಗೊಂದು ಗ್ರಂಥಾಲಯ”ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿ, ಇದೇ ಸಂದರ್ಭದಲ್ಲಿ ಪ್ರಾಧಿಕಾರ ಪ್ರಕಟಿಸಿರುವ ‘ಕುಮಾರವ್ಯಾಸ ಭಾರತ’ ಸಂಪುಟಗÀಳನ್ನು ಲೋಕಾರ್ಪಣೆಗೊಳಿಸಿದರು.
ಹಿರಿಯ ಸಾಹಿತಿ ಹಾಗೂ ವಿದ್ವಾಂಸ ನಾಡೋಜ ಡಾ. ಹಂಪ ನಾಗರಾಜಯ್ಯ ಅವರು, ‘ಮನೆಗೊಂದು ಗ್ರಂಥಾಲಯದ’ ಮೊದಲ ಗ್ರಂಥಾಲಯಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಇಂದು ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಅವರು ಮಾತನಾಡಿ, ‘ಮನೆಗೊಂದು ಗ್ರಂಥಾಲಯ’ ಈ ಯೋಜನೆಯು ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಈ ಯೋಜನೆಯಡಿ ರಾಜ್ಯಾದ್ಯಂತ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದರು.
ಪುಸ್ತಕ ಓದದಿದ್ದರೂ ಪರವಾಗಿಲ್ಲ, ಮನೆಗೊಂದು ಗ್ರಂಥಾಲಯ ಸ್ಥಾಪನೆ ಮಾಡಬೇಕು. ಕ್ರಿಯಾಶೀಲರಾಗಿ ಗ್ರಂಥಾಲಯ ಸ್ಥಾಪನೆ ಮಾಡುವವರಿಗೆ ಪ್ರತಿ ವರ್ಷ ವಾರ್ಷಿಕ ಪ್ರಶಸ್ತಿ ನೀಡಲಾಗುವುದು. ಪುಸ್ತಕ ಕೊಂಡುಕೊಳ್ಳುವ ವಾತಾವರಣ ಕಲ್ಪಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ಮಂಜುಳ, ನಿರ್ದೇಶಕರಾದ ಡಾ.ಕೆ.ಧರಣೀದೇವಿ ಮಾಲಗತ್ತಿ, ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್, ಸಾಹಿತಿಗಳು ಲೇಖಕರು ಉಪಸ್ಥಿತರಿದ್ದರು.
Publisher: ಕನ್ನಡ ನಾಡು | Kannada Naadu