ಬೆಂಗಳೂರು :ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಬಾಬು. ಕೆ. ವೀರೇಗೌಡ ಅವರಿಗೆ ನೀಡಲಾಗಿರುವ ಗೌರವ ಡಾಕ್ಟರೇಟ್ ಅನ್ನು ರಾಜಭವನದ ಬಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, "ಮೈಸೂರು ವಿಶ್ವವಿದ್ಯಾಲಯವು ದೇಶದ ಆರನೇ ಅತ್ಯಂತ ಹಳೆಯ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯದ ಮೊದಲ ವಿಶ್ವವಿದ್ಯಾಲಯವಾಗಿದೆ. ಈ ವಿಶ್ವವಿದ್ಯಾಲಯವು ದೇಶಕ್ಕೆ ಅನೇಕ ವಿಜ್ಞಾನಿಗಳು, ತತ್ವಜ್ಞಾನಿಗಳು ಮತ್ತು ರಾಜಕಾರಣಿಗಳನ್ನು ನೀಡಿದ್ದು, ಇವರೆಲ್ಲರೂ ಕರ್ನಾಟಕ ಮತ್ತು ಭಾರತದ ನಿರ್ಮಾಣದಲ್ಲಿ ಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ" ಎಂದು ಶ್ಲಾಘಿಸಿದರು.
"ಘಟಿಕೋತ್ಸವದ ಸಂದರ್ಭದಲ್ಲಿ ಶಿಕ್ಷಣ, ವಿಜ್ಞಾನ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮತ್ತು ದೇಶದ ಪ್ರಗತಿಗೆ ಗಣನೀಯ ಕೊಡುಗೆ ನೀಡಿದ ಮಹನೀಯರಿಗೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿಗಳನ್ನು ನೀಡುತ್ತಿರುವುದು ಸಂತೋಷದ ಸಂಗತಿಯಾಗಿದೆ" ಎಂದು ಹೇಳಿದರು.
"ಮೈಸೂರು ವಿಶ್ವವಿದ್ಯಾಲಯ ವತಿಯಿಂದ ಈ ದಿನ ಡಾ.ಬಾಬು ಕೆ ವಿರೇಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಎಚ್.ಎನ್.ಟಿ.ಬಿ ಯ ಈಶಾನ್ಯ ವಿಭಾಗದ ಉಪಾಧ್ಯಕ್ಷರಾಗಿ ಮತ್ತು ಮುಖ್ಯ ಸಾರಿಗೆ ಮತ್ತು ಸಂಚಾರ ಇಂಜಿನಿಯರ್ ಆಗಿ, ಅನೇಕ ಸಂಕೀರ್ಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. 8. ಉನ್ನತ ಮಟ್ಟದ ಮೂಲಸೌಕರ್ಯ ಯೋಜನೆಗಳ ನಿಮ್ಮ ಸಮರ್ಥ ನಿರ್ವಹಣೆಗಾಗಿ ನೀವು ಪ್ರಸಿದ್ಧರಾಗಿದ್ದೀರಿ. ಯುನೈಟೆಡ್ ಸ್ಟೇಟ್ಸ್‍ನ ಅನೇಕ ದೇವಾಲಯಗಳಿಗೆ ಪ್ರೊ. ಬೊನೊ ಎಂಜಿನಿಯರಿಂಗ್ ಮತ್ತು ಸೈಟ್ ವಿನ್ಯಾಸ ಸೇವೆಗಳ ಮೂಲಕ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರಿಗೆ ಅಭಿನಂದಿಸುತ್ತಾ, ಅವರ ಸಮಾಜ ಸೇವೆ ಹೀಗೆ ನಿರಂತರವಾಗಿರಲಿ ಇತರರಿಗೆ ಸ್ಫೂರ್ತಿಯಾಗಲಿ" ಎಂದು ಆಶಿಸುತ್ತೇನೆಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
Publisher: ಕನ್ನಡ ನಾಡು | Kannada Naadu