ಬೆಂಗಳೂರು : ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಇಂದು ಸಹಿ ಹಾಕಿದವು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು.
ಬ್ರಿಟಿμï ಡೆಪ್ಯುಟಿ ಹೈಕಮಿಷನ್‍ನ ಬ್ರಿಟಿμï ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, ಮಿಷನ್‍ನ ಉಪ ಮುಖ್ಯಸ್ಥ ಜೇಮ್ಸ್ ಗೋಡ್ಬರ್, ಲಿವರ್ ಪೂಲ್ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ.ಟಿಮ್ ಜೋನ್ಸ್, ಮತ್ತು ಸಮ-ಕುಲಪತಿ ಪೆÇ್ರ. ತಾರಿಕ್ ಅಲಿ ಅವರು ಅಂಕಿತಕ್ಕೆ ಸಹಿ ಹಾಕಿದರು.
ಆವಿμÁ್ಕರ ಕಾರ್ಯಕ್ರಮಗಳು ಹಾಗೂ ಶಿಕ್ಷಣ ಸಹಕಾರಕ್ಕೆ ಸಂಬಂಧಿಸಿದ ಸಹಭಾಗಿತ್ವವನ್ನು ಸದೃಢಗೊಳಿಸುವ ಜೊತೆಗೆ, ಅದನ್ನು ಉನ್ನತ ಸ್ತರಕ್ಕೆ ಕೊಂಡೊಯ್ಯಲು ಜಂಟಿ ಕಾರ್ಯ ತಂಡ ರಚಿಸುವ ಗುರಿಯನ್ನು ಕೂಡ ಒಡಂಬಡಿಕೆ ಹೊಂದಿದೆ.
ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಉನ್ನತ ಶಿಕ್ಷಣ ಪರಿಷತ್‍ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಕೆ.ಜಿ.ಚಂದ್ರಶೇಖರ ಸೇರಿದಂತೆ ಇತರರು ಉಪಸ್ಥಿತರಿದ್ದರು.
