ಕನ್ನಡ ನಾಡು | Kannada Naadu

ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ -2025 ಸಾಕ್ಷಿ – ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

12 Feb, 2025

ಬೆಂಗಳೂರು,:

ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ – 2025 ಸಾಕ್ಷಿಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು.
ಇಂದು ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ-2025ರ 15ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿಯ ಏರೋ ಇಂಡಿಯಾ ಧ್ಯೇಯವಾಕ್ಯ ‘ದಿ ರನ್ ವೇ ಟು ಎ ಬಿಲಿಯನ್ ಆಪರ್ಚುನಿಟಿಸ್’ ಎಂಬುದಾಗಿದೆ. ಪ್ರಧಾನಿಗಳ ವಿಕಸಿತ ಭಾರತ -2047 ಪರಿಕಲ್ಪನೆಯನ್ನು ನನಸಾಗಿಸುವ ನಿಟ್ಟಿನಲ್ಲಿ ನಾವು ಮುನ್ನಡೆಯಬೇಕಿದೆ. ಸಂಶೋಧನೆ, ಅಭಿವೃದ್ಧಿ, ಉತ್ಪಾದನಾ ಸಂಬಂಧಿತ ವಿಷಯಗಳಲ್ಲಿ ರಕ್ಷಣಾ ವಲಯವನ್ನು ಮುಂಚೂಣಿಗೆ ತರಬೇಕು ಎಂದರು.

ಈ ಬೃಹತ್ ಕಾರ್ಯಕ್ರಮದಲ್ಲಿ ಭಾರತದ ಸುಮಾರು 452 ಹಾಗೂ ವಿದೇಶದ 52 ಪ್ರದರ್ಶಕರು ಭಾಗವಹಿಸಿದ್ದಾರೆ. ಅಲ್ಲದೇ ರಕ್ಷಣಾ ಕ್ಷೇತ್ರದ ನಾಯಕರು ಉಪನ್ಯಾಸಕರು, ಹೂಡಿಕೆದಾರರು, ಅಧಿಕಾರಿಗಳು, ಉದ್ಯಮಿಗಳು ಹೀಗೆ ಹಲವರು ಒಂದೇ ವೇದಿಕೆಯಲ್ಲಿ ಭಾಗವಹಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ನಾವು ಮಾಡಿದ ತಾಂತ್ರಿಕ ಹೊಸ ಅಭಿವೃದ್ಧಿಗಳು ಫಲ ನೀಡಿವೆ. ರಕ್ಷಣಾ ಅಭಿವೃದ್ಧಿಯು 1.27 ಲಕ್ಷ ಕೋಟಿಯಿಂದ 2026 ರ ವೇಳೆಗೆ 1.60 ಲಕ್ಷ ಕೋಟಿ ತಲುಪಲಿದ್ದು, ರಕ್ಷಣಾ ವಲಯದಿಂದ ರಫ್ತು 21,000 ದಿಂದ 30,000 ಕೋಟಿ ತಲುಪಿ ಹೊಸ ದಾಖಲೆ ನಿರ್ಮಿಸಲಿದೆ ಎಂದರು.

ಈ ಏರೋ ಇಂಡಿಯಾ 2025 ರಿಂದ ಭಾರತದ ಆರ್ಥಿಕ ಅಭಿವೃದ್ಧಿ ಸಹ ಆಗಲಿದ್ದು, ದೇಶವು ವಿಶ್ವದ ಜಾಗತಿಕ ನಾಯಕ ಪಟ್ಟ ಅಲಂಕರಿಸುವಲ್ಲಿ ಸಹಕಾರವಾಗಿದೆ. ಈ ಬಾರಿ 80 ಕ್ಕೂ ಹೆಚ್ಚು ದೇಶಗಳು ವಿಚಾರ ಸಂಕಿರಣ, ಸಮಾವೇಶಗಳಲ್ಲಿ ಭಾಗವಹಿಸಲಿವೆ. ಅಲ್ಲದೇ 600 ಸ್ಟಾರ್ಟ್‍ಆಪ್, ಎಂಎಸ್‍ಎಂಇ ಮುಂತಾದವುಗಳು ಇದಕ್ಕೆ ಕೈಜೋಡಿಸಿವೆ. ಪ್ರಸ್ತುತ ಬಜೆಟ್ ನಲ್ಲಿ ರಕ್ಷಣಾ ಮಂತ್ರಾಲಯಕ್ಕೆ 6.81 ಲಕ್ಷ ಕೋಟಿ ಅನುದಾನ ಸಿಕ್ಕಿದ್ದು, 1.80 ಲಕ್ಷ ಕೋಟಿ ಅನ್ನು ಬಂಡವಾಳ ಸ್ವಾಧೀನಕ್ಕೆ ಬಳಸಿಕೊಳ್ಳಲಾಗುವುದು. ಇದಲ್ಲದೇ ಶೇ.75 ರಷ್ಟನ್ನು ದೇಶೀಯ ಮೂಲಗಳಿಗೆ ಪೊಕ್ರೂಟ್‍ಮೆಂಟ್ ಮೂಲಕ ಬಳಸಿಕೊಳ್ಳಲಾಗುವುದು. ಅಲ್ಲದೇ ಇದರಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಸಹ ಪ್ರೋತ್ಸಾಹ ದೊರೆಯಲಾಗಿದ್ದು, ಇವರೂ ಸಹ ಭಾಗೀದಾರರಾಗಬೇಕು ಎಂದರು.
ಸಿಲಿಕಾನ್ ವ್ಯಾಲಿಯೆಂದು ಖ್ಯಾತಿ ಪಡೆದಿರುವ ಬೆಂಗಳೂರಿನಲ್ಲಿ ಹೂಡಿಕೆ, ಕೈಗಾರಿಕೆ, ಸ್ಟಾರ್ಟ್‍ಆಫ್ ಗಳಿಗೆ ವಿಪುಲ ಅವಕಾಶಗಳಿವೆ. ಬೇರೆ ದೇಶಗಳ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಿರುವುದು ಹೆಮ್ಮೆಯ ವಿಷಯವಾಗಿದೆ.  ಬೆಂಳೂರಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ  ‘ವೈಮಾನಿಕ ಮಹಾಕುಂಭಮೇಳ’ ದಂತೆ ಕಾಣುತ್ತಿದ್ದು, ಹೆಚ್ಚು ಜನ ಭಾಗವಹಿಸಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್‍ಗಳ ತಯಾರಕರನ್ನು ಹೆಚ್ಚು, ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ ಪೆÇ್ರೀತ್ಸಾಹ ನೀಡಬೇಕಾಗಿ ರಕ್ಚಣಾ ಸಚಿವರಲ್ಲಿ ಮನವಿ ಮಾಡಿದರು

ಕರ್ನಾಟಕ, ಭಾರತದ ತಾಂತ್ರಿಕ ಮತ್ತು ಕೈಗಾರಿಕಾ ಪ್ರಗತಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ವಿಶ್ವ ದರ್ಜೆಯ ಸಂಶೋಧನಾ ಸಂಸ್ಥೆಗಳು, ಅತ್ಯಾಧುನಿಕ ಏರೋಸ್ಪೇಸ್ ಕಂಪನಿಗಳನ್ನು ಹೊಂದಿರುವ ಕೌಶಲ್ಯಪೂರ್ಣ ಕಾರ್ಯಪಡೆಯೇ ನಮ್ಮಲ್ಲಿದೆ. ನಮ್ಮ ರಾಜ್ಯ ದೇಶದ ಒಟ್ಟು ದೇಶೀಯ ಉತ್ಪನ್ನ, ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಯ ಒಳಹರಿವು ಸೇರಿದಂತೆ ಪ್ರಮುಖ ಆರ್ಥಿಕ ಕ್ಷೇತ್ರಗಳಲ್ಲಿ ಅಗಾಧ ಬೆಳವಣಿಗೆ ಕಂಡಿದೆ. ಸಂಶೋಧನೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಉದ್ದಿಮೆಗೆ ಪೆÇ್ರೀತ್ಸಾಹಿಸುವ ಭವಿಷ್ಯದ ದೃಷ್ಟಿಯಿಂದ ಕೈಗಾರಿಕಾ ನೀತಿಯನ್ನು ಪೆÇೀಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು

ಬೆಂಗಳೂರು ಏರ್ ಶೋ ನಾಗರಿಕ ಮತ್ತು ಮಿಲಿಟರಿ ವಾಯುಯಾನ ಎರಡರಲ್ಲೂ ಭಾರತದ ಪ್ರಗತಿಯನ್ನು ಎತ್ತಿ ತೋರಿಸುವ ದೊಡ್ಡ ಕಾರ್ಯಕ್ರಮ. ಇದು ಕೇವಲ ಪ್ರದರ್ಶನವಲ್ಲ. ಇದು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತದ ಸಾಮಥ್ರ್ಯ ಬೆಳೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಅಲ್ಲದೆ ಅಂತರರಾಷ್ಟ್ರೀಯ ಪಾಲುದಾರಿಕೆಗಳನ್ನು ಬೆಳೆಸುವ ವೇದಿಕೆ ಎಂದರು.

ನಮ್ಮ ರಾಜ್ಯವು ದೇವನಹಳ್ಳಿ ಬಳಿ ಏರೋಸ್ಪೇಸ್ ಕಂಪನಿಗಳಿಗಾಗಿ 1 ಸಾವಿರ ಎಕರೆ ಪ್ರದೇಶವನ್ನು ಮೀಸಲಿಟ್ಟು ಏರೋಸ್ಪೇಸ್ ಪಾರ್ಕ್ ಸ್ಥಾಪಿಸಿದೆ. ಏರೋಸ್ಪೇಸ್ ಉದ್ಯಮವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಬೆಂಗಳೂರು ಅತ್ಯುತ್ತಮ ನಗರವಾಗಿದೆ. ಅನೇಕ ಬ್ರ್ಯಾಂಡ್‍ಗಳು ಮತ್ತು ಅತ್ಯುತ್ತಮ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಬೆಂಗಳೂರು ಸೂಕ್ತ ಸ್ಥಳವಾಗಿದೆ ಎಂದರು.

ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳಲು, ಉದ್ದಿಮೆಗಳ ಅತ್ಯುತ್ತಮ ಉತ್ಪನ್ನಗಳನ್ನು ಪರೀಕ್ಷಿಸಲು ಇದು ಸೂಕ್ತ ಸ್ಥಳವಾಗಿದೆ.ಬೆಂಗಳೂರು ಭಾರತದ ಏರೋಸ್ಪೇಸ್ ರಾಜಧಾನಿ. ದೇಶದ ಏರೋಸ್ಪೇಸ್ ಉತ್ಪಾದನೆ ಮತ್ತು ರಕ್ಷಣಾ ಸಂಶೋಧನೆಯ ಶೇ. 60 ಕ್ಕಿಂತ ಹೆಚ್ಚು ಕೊಡುಗೆಯನ್ನು ನಮ್ಮ ರಾಜ್ಯ ನೀಡುತ್ತಿದೆ ಎಂದರು.

ಎಚ್ ಎಎಲ್, ಇಸ್ರೋ ಮತ್ತು ಬೋಯಿಂಗ್ ಇಂಡಿಯಾದಂತಹ ಪ್ರಮುಖ ಸಂಸ್ಥೆಗಳು ಭಾರತದ ರಕ್ಷಣಾ ಮತ್ತು ಬಾಹ್ಯಾಕಾಶ ಸಾಮಥ್ರ್ಯಗಳಿಗೆ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿವೆ. ಬೆಂಗಳೂರಿನ ಏರೋಸ್ಪೇಸ್ ವಲಯದಲ್ಲಿ 1,50,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದು, ನಗರವನ್ನು ವಾಯುಯಾನ ಮತ್ತು ರಕ್ಷಣಾ ತಂತ್ರಜ್ಞಾನದಲ್ಲಿ ಜಗತ್ತಿನಲ್ಲಿಯೇ ಸಾಕಷ್ಟು ಹೆಸರು ಮಾಡಿದೆ” ಎಂದರು.

ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಬೆಂಗಳೂರು ಜಾಗತಿಕ ಏರೋಸ್ಪೇಸ್ ನಗರಗಳಲ್ಲಿ ಮೂರನೇ ಸ್ಥಾನವನ್ನು ಪಡೆದಿದೆ. ಕರ್ನಾಟಕ ಸರ್ಕಾರವು ಬೆಂಗಳೂರು, ಬೆಳಗಾವಿ, ಮೈಸೂರು, ತುಮಕೂರು ಮತ್ತು ಚಾಮರಾಜನಗರಗಳಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕೇಂದ್ರಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಹೇಳಿದರು.

ವಾಣಿಜ್ಯ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಕ್ರಾಂತಿಯನ್ನೇ ಉಂಟು ಮಾಡುತ್ತಿರುವ ಡ್ರೋನ್ ತಂತ್ರಜ್ಞಾನ ಮತ್ತು ಮಾನವರಹಿತ ವೈಮಾನಿಕ ತಂತ್ರಜ್ಞಾನದ ರುವಾರಿಯಾಗಿ ಬೆಂಗಳೂರು ಬೆಳೆಯುತ್ತಿದೆ ಎಂದರು.

 ರಾಜಧಾನಿಯಲ್ಲಿ 21 ಎಂಜಿನಿಯರಿಂಗ್ ಕಾಲೇಜುಗಳಿವೆ. ವಿಶ್ವದ ಯಾವುದೇ ನಗರಗಳಿಗೆ ಹೋಲಿಸಿದರೆ ನಾವೇ ಮೊದಲ ಸ್ಥಾನದಲ್ಲಿ ನಿಲ್ಲುತ್ತೇವೆ. ಬೆಂಗಳೂರಿನ ವಿಶಿಷ್ಟ ಪರಿಸರವು ಭಾರತ ಮತ್ತು ಪ್ರಪಂಚದಾದ್ಯಂತದ ಅತ್ಯುತ್ತಮ ಪ್ರತಿಭೆಗಳನ್ನು ಆಕರ್ಷಿಸುತ್ತಿದೆ ಎಂದರು.

ಕರ್ನಾಟಕವು ಭಾರತದ ಏರೋಸ್ಪೇಸ್ ವಲಯದಲ್ಲಿ ಅನೇಕ ಬಾರಿ ನಿರ್ಣಾಯಕ ಪಾತ್ರವನ್ನು ವಹಿಸಿದೆ. ಅಲ್ಲದೇ ರಕ್ಷಣಾ ಸೇವೆಗಳಿಗಾಗಿ ದೇಶದ ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನೆಯ ಶೇ.67 ಮತ್ತು ಭಾರತದ ಏರೋಸ್ಪೇಸ್-ಸಂಬಂಧಿತ ರಫ್ತಿನ ಶೇ.65 ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

ವಿಮಾನ ಸೇವೆ ಮತ್ತು ವಿಮಾನಗಳನ್ನು ದುರಸ್ತಿ ಮಾಡುವ ಕ್ಷೇತ್ರದಲ್ಲಿ ಭಾರತ ಮುಂದಿದೆ. ಆದರೆ ವಿಮಾನಗಳು ಮತ್ತು ಹೆಲಿಕಾಪ್ಟರ್‍ಗಳ ತಯಾರಿಕೆ ಇನ್ನೂ ಸ್ವಲ್ಪ ಹಿಂದೆ ಬಿದ್ದಿದೆ. ದೇಶವು ಬಳಸುವ ಹೆಚ್ಚಿನ ವಿಮಾನಗಳು ಮತ್ತು ಹೆಲಿಕಾಪ್ಟರ್‍ಗಳನ್ನು ಇನ್ನೂ ಇತರ ರಾಷ್ಟ್ರಗಳಿಂದ ಖರೀದಿಸಲಾಗುತ್ತಿದೆ ಎಂದರು

ವಾಣಿಜ್ಯ ಮತ್ತು ರಕ್ಷಣಾ ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿರುವ ವಿಶ್ವದ ಏಕೈಕ ನಗರ ಬೆಂಗಳೂರು. ಈ ಕ್ಷೇತ್ರಕ್ಕೆ ಹೆಚ್ಚಿನ ಮಹಿಳೆಯರು ಕೊಡುಗೆ ನೀಡುತ್ತಿದ್ದಾರೆ. ಯು.ಎಸ್., ಫ್ರಾನ್ಸ್ ಮತ್ತು ರμÁ್ಯದಂತಹ ದೇಶಗಳೊಂದಿಗೆ ಪಾಲುದಾರಿಕೆಗಳ ಮೂಲಕ ಭಾರತದ ಏರೋಸ್ಪೇಸ್ ಉದ್ಯಮವು ಬೆಳೆಯುತ್ತಿದೆ ಎಂದರು.

ಜಾಗತಿಕ ಮಾರುಕಟ್ಟೆಯಲ್ಲಿ ನಮ್ಮ ಸ್ಥಾನವನ್ನು ಈ ಏರ್ ಶೋ ಬಲಪಡಿಸುತ್ತಿದೆ. ಈ ಪ್ರದರ್ಶನವು ದೇಶಗಳು ಒಗ್ಗೂಡಲು, ಜ್ಞಾನವನ್ನು ಹಂಚಿಕೊಳ್ಳಲು ಮತ್ತು ಎಲ್ಲರಿಗೂ ಪ್ರಯೋಜನವಾಗುವ ವಾತಾವರಣ ನಿರ್ಮಿಸಲು ಉತ್ತಮ ಅವಕಾಶ ನೀಡುತ್ತದೆ ಎಂದರು.

ಈ ಕಾರ್ಯಕ್ರಮ ಬಾಹ್ಯಾಕಾಶದಲ್ಲಿ ಭಾರತದ ಶಕ್ತಿ, ಪ್ರಗತಿ ಮತ್ತು ನಾಯಕತ್ವದ ಸಂಕೇತವಾಗಿದೆ. ಬಾಹ್ಯಾಕಾಶ ಮತ್ತು ರಕ್ಷಣಾ ಹೂಡಿಕೆದಾರರು, ಉದ್ಯಮಿಗಳು ಮತ್ತು ವ್ಯಾಪಾರ ನಾಯಕರು ಕರ್ನಾಟಕವನ್ನು ಮೊದಲು ಆಯ್ಕೆ ಮಾಡಬೇಕು.  2025 ರ ಏರ್ ಶೋ ಎಲ್ಲರಿಗೂ ಯಶಸ್ವಿ ಮತ್ತು ಸ್ಪೂರ್ತಿದಾಯಕ ಅನುಭವವನ್ನು ನೀಡಲಿ ಎಂದು ಶುಭ ಹಾರೈಸಿದರು

ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಖಾತೆಯ ರಾಜ್ಯ ಮಂತ್ರಿಗಳಾದ ಸಂಜಯ್ ಸೇಠ್, ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫ್ಯೂ ರಿಯೋ, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚವ್ಹಾಣ್, ನೌಕಾ ಸಿಬ್ಬಂದಿ ಮುಖ್ಯಸ್ಥರಾದ ಅಡ್ಮಿರಲ್ ದಿನೇಶ್ ಕೆ. ತ್ರಿಪತಿ, ಸೇನಾ ಸಿಬ್ಬಂದಿ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕೇಂದ್ರ ರಕ್ಷಣಾ ಕಾರ್ಯದರ್ಶಿ ರಾಕೇಶ್ ಕುಮಾರ್ ಸಿಂಗ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ತಿಳಿನೀಲಿ ಆಗಸದಲ್ಲಿ ಹಲವು ವೈಮಾನಿಕ ವಿಮಾನ ಹಾರಾಟ  ನಡೆಸಿ ಜನಮನ ಆಕರ್ಷಿಸಿದವು.

 

Publisher: ಕನ್ನಡ ನಾಡು | Kannada Naadu

Login to Give your comment
Powered by