ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ಖಾಲಿಯಿರುವ ಅಧ್ಯಕ್ಷರ ಸ್ಥಾನಕ್ಕೆ ಫೆಬ್ರವರಿ 17 ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಚೇರಿಯಲ್ಲಿ ಚುನಾವಣೆ ಸಭೆಯನ್ನು ನಿಗಧಿಪಡಿಸಲಾಗಿದೆ.
ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ನಾಮಪತ್ರ ಸ್ವೀಕರಿಸಲು ಚುನಾವಣಾಧಿಕಾರಿಗಳು ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಕೃತಗೊಳಿಸಿರುತ್ತಾರೆ.
ನಾಮಪತ್ರಗಳನ್ನು 2025 ನೇ ಫೆಬ್ರವರಿ 17 ರಂದು ಬೆಳಿಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ ಸ್ವೀಕರಿಸಲಾಗುವುದು. ಅಂದು ಮಧ್ಯಾಹ್ನ 12.00 ಗಂಟೆಗೆ ಚುನಾವಣಾ ಸಭೆ ನಡೆಯಲಿದ್ದು, ಸಭೆಯಲ್ಲಿ ಸದಸ್ಯರ ಹಾಜರಾತಿ, ನಾಮನಿರ್ದೇಶನಗಳ ಪರಿಶೀಲನೆ, ಉಮೇದುವಾರಿಕೆಗಳನ್ನು ಹಿಂಪಡೆಯುವ ಪ್ರಕಿಯೆಗಳು ಜರುಗಲಿವೆ. ಅಗತ್ಯವಿದ್ದಲ್ಲಿ ಚುನಾವಣೆ ಮತ್ತು ಮತ ಎಣಿಕೆ ನಡೆಯಲಿದೆ. ನಂತರ ಚುನಾವಣೆಯ ಫಲಿತಾಂಶ ಘೋಷಿಸಲಾಗುವುದು ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಚುನಾವಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Publisher: ಕನ್ನಡ ನಾಡು | Kannada Naadu