ಕನ್ನಡ ನಾಡು | Kannada Naadu

ಕೆಎಸ್‍ಒಯು : 2024-25ನೇ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿ ಪ್ರಾರಂಭ

13 Feb, 2025

 

ಬೆಂಗಳೂರು :

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ನೇ ಜನವರಿ ಆವೃತ್ತಿ ಶೈಕ್ಷಣಿಕ ಸಾಲಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗೆ ಫೆಬ್ರವರಿ 10 ರಿಂದ ಪ್ರಾರಂಭವಾಗಿದೆ.

ಸ್ನಾತಕ / ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ / ಬಿ.ಕಾಂ / ಬಿ.ಬಿ.ಎ / ಬಿ.ಸಿ.ಎ / ಬಿ.ಎಸ್ಸಿ., ಎಂ.ಎ / ಎಂ.ಸಿ.ಜೆ / ಎಂ.ಕಾಂ., ಬಿ.ಎಲ್.ಐ.ಎಸ್ಸಿ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್.,  ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಲ್ಲೇಶ್ವರಂನ ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ. ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳು ನೀಡಿದ್ದು ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ ಆನ್‍ಲೈನ್ ಅಡ್ಮಿಷನ್ ಪೆÇೀರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪಡೆಯಬಹುದಾಗಿದೆ.
ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ,  ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ / ಬಿ.ಎಂ.ಟಿ.ಸಿ / ಎನ್.ಡಬ್ಲು.ಕೆ.ಎಸ್.ಆರ್.ಟಿ.ಸಿ / ಕೆ.ಕೆ.ಆರ್.ಟಿ.ಸಿ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿಯಿದೆ.

ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಮೃತರಾದ ಪೋಷಕರ ಮಕ್ಕಳಿಗೆ, ತೃತಿಯ ಲಿಂಗದ (Transgender) ವಿದ್ಯಾರ್ಥಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ / ಎಂಬಿಎ ಹೊರತುಪಡಿಸಿ), ಪೂರ್ಣ ಶುಲ್ಕ ವಿನಾಯಿತಿಯಿರುತ್ತದೆ. ಎಸ್‍ಸಿ/ಎಸ್‍ಟಿ/ಒಬಿಸಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಎಸ್‍ಎಸ್‍ಪಿ ಮುಖಾಂತರ ವಿದ್ಯಾರ್ಥಿ ವೇತನದ ಸೌಲಭ್ಯವಿರುತ್ತÀದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03, ದೂರವಾಣಿ ಸಂಖ್ಯೆ: 080-23448811, 9741197921, 9483517160, 8553064767 ನ್ನು ಸಂಪರ್ಕಿಸುವುದು ಎಂದು ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಶಶಿಕಲಾ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Publisher: ಕನ್ನಡ ನಾಡು | Kannada Naadu

Login to Give your comment
Powered by