ಕನ್ನಡ ನಾಡು | Kannada Naadu

ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

17 Feb, 2025

 

ಬೆಂಗಳೂರು : ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ  ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿಷಯಗಳನ್ನು ಬೋಧಿಸಲು ಅತಿಥಿ ಉಪನ್ಯಾಸಕರ (Part Time/Full Time) ಹುದ್ದೆಗಳಿಗೆ ಎಂ.ಟೆಕ್/ಪಿ.ಹೆಚ್.ಡಿ ಪದವಿ ಹೊಂದಿರುವ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.uvce.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ಕುಲಸಚಿವರು, ಯುವಿಸಿಇ, ಕೆ.ಆರ್. ವೃತ್ತ, ಬೆಂಗಳೂರು ಫೆಬ್ರವರಿ 21 ರೊಳಗೆ ಸಲ್ಲಿಸುವುದು. ನಿಗಧಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಕುಲಸಚಿವರು ಅಥವಾ ಆ ವಿಭಾಗದ ಮುಖ್ಯಸ್ಥರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by