ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಮುಧೋಳ ಹಾಗೂ ಬೆಳಗಲಿಯಲ್ಲಿ ಫೆಬ್ರವರಿ 22, 23 ಹಾಗೂ 24 ರಂದು ನಡೆಯುವ ಕವಿ ಚಕ್ರವರ್ತಿ ರನ್ನ ವೈಭವ ವೈಭವ -2025 ಸಾಂಸ್ಕøತಿಕ ಉತ್ಸವದ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆಯ ಮುಂಭಾಗ “ರನ್ನ ರಥ”ಕ್ಕೆ ಅಬಕಾರಿ ಸಚಿವ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಜೆ.ಟಿ.ಪಾಟೀಲ್, ಬಿ.ಬಿ.ಚಿಮ್ಮನಕಟ್ಟಿ, ಪರಿಷತ್ ಸದಸ್ಯರಾದ ಪಿ.ಹೆಚ್.ಪೂಜಾರ್, ಹನುಮಂತ ನಿರಾಣಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಡಾ.ಧರಣಿದೇವಿ ಮಾಲಗತ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Publisher: ಕನ್ನಡ ನಾಡು | Kannada Naadu