ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಮತ್ತು ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರನ್ನು ದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿ ನೆನೆಗುದಿಗೆ ಬಿದ್ದಿರುವ ರಾಜ್ಯದ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನ ನೀಡಲು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ಸಣ್ಣ ನೀರಾವರಿ ಸಚಿವ ಬೋಸರಾಜ್, ದೆಹಲಿಯಲ್ಲಿ ರಾಜ್ಯ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ರಾಜ್ಯ ಹಾಗೂ ಕೇಂದ್ರ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
Publisher: ಕನ್ನಡ ನಾಡು | Kannada Naadu