ಕನ್ನಡ ನಾಡು | Kannada Naadu

ಕರ್ನಾಟಕ ಇಂಟರ್‍ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ -2025” ಸಮಾವೇಶ

25 Feb, 2025

 

ಬೆಂಗಳೂರು : ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಕರ್ನಾಟಕ ಟೂರಿಸಮ್ ಸೊಸೈಟಿ ಅವರ ಸಹಯೋಗದೊಂದಿಗೆ ಫೆಬ್ರವರಿ 26 ರಿಂದ 28ರ ವರೆಗೆ ಎರಡನೇ ಆವೃತ್ತಿಯ “ಕರ್ನಾಟಕ ಇಂಟರ್‍ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ -2025” ಸಮಾವೇಶವನ್ನು ಸನ್ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರ ನೇತೃತ್ವದಲ್ಲಿ ಬೆಂಗಳೂರು ತುಮಕೂರು ರಸ್ತೆಯ ಮಂಜುನಾಥನಗರದಲ್ಲಿರುವ ಬಿ.ಐ.ಇ.ಸಿ ಯಲ್ಲಿ ಹಮ್ಮಿಕೊಳ್ಳಲಾಗಿದೆ.  

ಸಮಾವೇಶದ ಉದ್ಘಾಟನೆಯನ್ನು, ಫೆಬ್ರವರಿ 26ರಂದು ಸಂಜೆ 05 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ತಾಜ್ ವೆಸ್ಟ್ ಎಂಡ್‍ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಲಿದ್ದಾರೆ, ಕಾರ್ಯಕ್ರಮದಲ್ಲಿ ಮಾನ್ಯ ಕೇಂದ್ರ ಹಣಕಾಸು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್, ಮಾನ್ಯ ಕೇಂದ್ರ ಸಣ್ಣ ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಉದ್ಯೋಗ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಮಾನ್ಯ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ. ಪಾಟೀಲ್ ಅವರ ಘನ ಉಪಸ್ಥಿತಿಯೊಂದಿಗೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಸಮಾರಂಭದಲ್ಲಿ ಸಚಿವರು, ಶಾಸಕರು, ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್‍ನ ಸದಸ್ಯರು ಸೇರಿದಂತೆ ಗಣ್ಯರು, ಅಧಿಕಾರಿಗಳು, ಅಂತತರಾಷ್ಟ್ರೀಯ ಮತ್ತು ರಾಷ್ಟ್ರೀಯ ಖರೀದಿದಾರರು, ಪ್ರವಾಸೋದ್ಯಮ ಇಲಾಖೆಯ ಭಾಗಿದಾರರು ಉಪಸ್ಥಿತರಿರುವರು.

ಫೆಬ್ರವರಿ 27 ಮತ್ತು 28 ರಂದು ಮಾನ್ಯ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರ ನೇತೃತ್ವದಲ್ಲಿ ವ್ಯವಹಾರಿಕ (ಬಿ2ಬಿ) (ಬಿಸಿನೆಸ್) ಸಭೆಗಳನ್ನು ಬೆಂಗಳೂರು ತುಮಕೂರು ರಸ್ತೆಯ ಮಂಜುನಾಥನಗರದಲ್ಲಿರುವ ಬಿ.ಐ.ಎ.ಸಿ ಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ 150 ಅಂತರರಾಷ್ಟ್ರೀಯ ಖರೀದಿದಾರರು, 250 ರಾಷ್ಟ್ರೀಯ ಖರೀದಿದಾರರು ಮತ್ತು ಕರ್ನಾಟಕ ರಾಜ್ಯದ 150 ಪ್ರವಾಸೋದ್ಯಮ ಭಾಗಿದಾರರು (ಖರೀದಿದಾರರು – ಮಾರಾಟಗಾರರು) ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.  

Publisher: ಕನ್ನಡ ನಾಡು | Kannada Naadu

Login to Give your comment
Powered by