ಬೆಂಗಳೂರು : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರು ಫೆಬ್ರವರಿ 28 ರಂದು ಬೀದರ್ ಜಿಲ್ಲೆಯ ಪ್ರವಾಸ ಕೈಗೊಂಡು ಅಂದು ಬೀದರ್ ಜಿಲ್ಲಾ ಪಂಚಾಯತ್ ಕಾರ್ಯಾಲದಲ್ಲಿ ಹಮ್ಮಿಕೊಂಡಿರುವ ಕೆ.ಡಿ.ಪಿ ಸಭೆ ಮತ್ತು ಬೀದರ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅಂದೇ ಕೇಂದ್ರಸ್ಥಾನಕ್ಕೆ ಆಗಮಿಸಲಿರುವರು ಎಂದು ಸರ್ಕಾರದ ಉಪ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಆರ್ ರಾಜಶೇಖರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Publisher: ಕನ್ನಡ ನಾಡು | Kannada Naadu