ಬೆಂಗಳೂರು : ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧೀನದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮೇದಾರ ಅಲೆಮಾರಿ ಅಭಿವೃದ್ಧಿ ನಿಗಮಗಳಲ್ಲಿ 2024-25ನೇ ಸಾಲಿನಲ್ಲಿ ಉದ್ದೇಶಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅನುದಾನವನ್ನು ಹೆಚ್ಚಳ ಮಾಡಲು ಈಗಾಗಲೇ ಕ್ರಮ ವಹಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.
ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಯಶಪಾಲ್ ಎ ಸುವರ್ಣ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳು ಹಲವು ಬಾರಿ ಅರ್ಜಿಗಳನ್ನು ಸಲ್ಲಿಸುವುದರಿಂದ ಉಂಟಾಗುವ ತೊಂದರೆಯನ್ನು ತಪ್ಪಿಸುವ ದೃಷ್ಟಿಯಿಂದ ಈಗಾಗಲೇ ಅರ್ಜಿ ಸಲ್ಲಿಸಿ ಆಯ್ಕೆಯಾಗಿಲ್ಲದಿದ್ದರೆ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ದಾಖಲಾತಿಗಳನ್ನು ಮರು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈಗಾಗಲೇ ಸಲ್ಲಿಸಿರುವ ದಾಖಲೆಗಳನ್ನೇ ಪರಿಗಣಿಸಲಾಗುವುದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳನ್ನು 2024-25ನೇ ಸಾಲಿನಲ್ಲಿ ಪರಿಗಣಿಸಲು ಕ್ರಮ ವಹಿಸಲಾಗುತ್ತಿದೆ ಹಾಗೂ ಅರ್ಜಿದಾರರು ಪುನ: ಅರ್ಜಿಗಳನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದರು.
Publisher: ಕನ್ನಡ ನಾಡು | Kannada Naadu