ಕನ್ನಡ ನಾಡು | Kannada Naadu

ಬೆಳ್ತಂಡಿಯ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಆದಷ್ಟು ಶೀಘ್ರ ಅನುದಾನ ಬಿಡುಗಡೆಗೆ ಕ್ರಮ - ಸಚಿವ ಸತೀಶ್ ಜಾರಕಿಹೊಳಿ

12 Mar, 2025

 

ಬೆಂಗಳೂರು :
 
ಬೆಳ್ತಂಗಡಿಯಲ್ಲಿನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಆದಷ್ಟು ಶೀಘ್ರವಾಗಿ ಅನುದಾನವನ್ನು ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು.
ಇಂದು ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿನ ನ್ಯಾಯಾಲಯ ಸಂಕೀರ್ಣ ಕಟ್ಟಡ ಹಾಗೂ ಪೀಠೋಪಕರಣಗಳ ಪೂರೈಕೆ ಕಾಮಗಾರಿಗೆ ರೂ. 13.92 ಕೋಟಿ ಅನುದಾನವನ್ನು ಬಿಡುಗಡೆ ಮಾಡುವಂತೆ ದಿನಾಂಕ: 24-02-2025ರಂದು ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಿಕೊಡಲಾಗಿದೆ. ಆರ್ಥಿಕ ಇಲಾಖೆಯ ಅನುಮೋದನೆ ನಂತರ ಅನುದಾನ ಬಿಡುಗಡೆ ಮಾಡಿ ಆದಷ್ಟು ಕೂಡಲೇ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Publisher: ಕನ್ನಡ ನಾಡು | Kannada Naadu

Login to Give your comment
Powered by