ಕನ್ನಡ ನಾಡು | Kannada Naadu

ಸಾರ್ವಜನಿಕರು/ ವಿವಿಧ ಜಾತಿ/ ಸಮುದಾಯದವರು, ಸಂಘ ಸಂಸ್ಥೆಗಳು ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಜಾತಿ ಹೆಸರನ್ನು ಸೇರಿಸಲು, ಜಾತಿ ಹೆಸರನ್ನು ತೆಗೆಯಲು ಅವಕಾಶ

14 Mar, 2025

 

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಲ್ಲಿ, ಸಾರ್ವಜನಿಕರು/ ವಿವಿಧ ಜಾತಿ/ಸಮುದಾಯದವರು, ಸಂಘ ಸಂಸ್ಥೆಗಳು ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಜಾತಿ ಹೆಸರನ್ನು ಸೇರಿಸುವ, ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಹೆಚ್ಚಾಗಿ ಸೇರಿಸಲಾಗಿದೆ ಎಂದು ಕಂಡುಬಂದಲ್ಲಿ ಅಂತಹ ಜಾತಿಗಳನ್ನು ಕೈಬಿಡುವ ಕುರಿತಂತೆ ಹಾಗೂ ಇತರೆ ಮನವಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಆಯೋಗವನ್ನು ಸಂಪರ್ಕಿಸಬಹುದಾಗಿದೆ.

ಅರ್ಜಿದಾರರು ತಮ್ಮ ಮನವಿಯನ್ನು ನೇರವಾಗಿ ಅಥವಾ ಅಂಚೆಯ ಮೂಲಕ ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ದೇವರಾಜ ಅರಸು ಭವನ 2ನೇ ಮಹಡಿ, ಮಿಲ್ಲರ್ಸ್ ಟ್ಯಾಂಕ್ ಬೆಡ್ ಏರಿಯಾ, ವಸಂತನಗರ, ಬೆಂಗಳೂರು-560052 ಇವರಿಗೆ ಸಲ್ಲಿಸಬಹುದಾಗಿದೆ. ಹಾಗೂ ಜಿಲ್ಲಾ ಹಂತದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಅಥವಾ ಆಯಾ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Publisher: ಕನ್ನಡ ನಾಡು | Kannada Naadu

Login to Give your comment
Powered by