ಬೆಂಗಳೂರು : ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾದೆಗೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ತೆಂಗು ಬೆಳೆಗೆ ಬಿಳಿ ರೋಗ ಬಾಧೆಯಿಂದ ಮುಕ್ತಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಸಮಗ್ರ ಪೆÇೀಷಕಾಂಶ ಮತ್ತು ಕೀಟ ಮತ್ತು ರೋಗಗಳ ನಿರ್ವಹಣೆಗೆ ಪ್ರಸಕ್ತ ಸಾಲಿನಲ್ಲಿ ತೆಂಗು ಅಭಿವೃದ್ಧಿ ಮಂಡಳಿಗೆ ರೂ.15.31 ಕೋಟಿಗಳ ಅನುದಾನವನ್ನು ಒದಗಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಸುರೇಶ್ ಬಾಬು ಸಿ.ಬಿ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ತೋಟಗಾರಿಕಾ ಸಚಿವರ ಪರವಾಗಿ ಉತ್ತರಿಸಿದ ಅವರು, ರಾಜ್ಯದ 14 ಜಿಲ್ಲೆಗಳ ಒಟ್ಟು 1,48,448 ಹೆಕ್ಟೇರ್ ಪ್ರದೇಶದಲ್ಲಿನ ತೆಂಗು ಬೆಳೆಗೆ ಬಿಳಿ ನೊಣದ ಕೀಟ ಬಾಧೆ ಕಾಡುತ್ತಿದ್ದು, ಈ ಕೀಟ ಬಾಧೆಯು ತೆಂಗಿನ ಮರಗಳ ನೈಸರ್ಗಿಕ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವ ಮೂಲಕ ಸಮಗ್ರ ಪೆÇೀಷಕಾಂಶಗಳನ್ನು ಒದಗಿಸಿ ಕೀಟ ಮತ್ತು ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಾತ್ಯಕ್ಷತೆ ತಾಕುಗಳನ್ನು ನಿರ್ವಹಿಸಲು ಹೆಕ್ಟೇರ್‍ಗೆ 35,000 ರೂ.ಗಳನ್ನು 2 ವರ್ಷಗಳ ಅವಧಿಯಲ್ಲಿ ವಿನಿಯೋಗಿಸಲಾಗುತ್ತಿದೆ. ತೆಂಗು ಮರಗಳಿಗೆ ಬಿಳಿ ಹುಳ ರೋಗ ತಗಲಿರುವ ಹಿನ್ನೆಲೆಯಲ್ಲಿ ಸದಸ್ಯರು ರೈತರಿಗೆ ಪರಿಹಾರ ನೀಡಬೇಕು ಎಂದು ಕೇಳುತ್ತಿದ್ದಾರೆ. ಸಂಬಂಧಿಸಿದ ಸಚಿವರುಗಳೊಂದಿಗೆ ಚರ್ಚಿಸಿ ರೋಗ ಬಾಧೆಯಿಂದ ಬೆಳೆ ನಷ್ಟವಾಗಿರುವ ತೆಂಗು ಬೆಳೆಗಾರರಿಗೆ ಪರಿಹಾರ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ರೋಗದ ಬಗ್ಗೆ ಸಂಶೋಧನೆ ಕಾರ್ಯ ಆಗಬೇಕು ಈ ಕುರಿತು ರೈತರಿಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
Publisher: ಕನ್ನಡ ನಾಡು | Kannada Naadu